ಮದ್ದೂರು: ಮದ್ದೂರು ಪಟ್ಟಣದ ಪ್ರಸಿದ್ಧಿ ಹೊಳೆ ಆಂಜನೇಯನ ಸ್ವಾಮಿ ದೇವಸ್ಥಾನಕ್ಕೆ ಸಚಿವ ಎನ್.ಚಲುವರಾಯಸ್ವಾಮಿ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿರು.
ಮದ್ದೂರು ಪಟ್ಟಣದಲ್ಲಿ ವಿವಿಧ ಕಾಮಗಾರಿ ಚಾಲನೆ ನೀಡುವ ಸಲುವಾಗಿ ಆಗಮಿಸಿದ ವೇಳೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಹೊಳೆ ಆಂಜನೇಯ ದೇವಾಲಯದ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿ ಹಾಗೂ ಶಿಂಷಾ ನದಿಗೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಚಿವರು ಚಾಲನೆ ನೀಡಿದ್ದಾರೆ.
ಸಚಿವ ಎನ್.ಚಲುವರಾಯಸ್ವಾಮಿಗೆ ಶಾಸಕ ಕದಲೂರು ಉದಯ್ ಸಾಥ್ ನೀಡಿದ್ದಾರೆ.