ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇಂದು ಫೆ.8 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಇಂದು ಫೆ. 8 ರಂದು ಬೆಳಿಗ್ಗೆ 11.00 ಗಂಟೆಗೆ ಮಂಡ್ಯ ಕರ್ನಾಟಕ ರಾಜ್ಯ ವೈದ್ಯಾಧಿಕಾರಿ ಸಂಘದ ನೂತನ ಕಟ್ಟಡದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಪಾಂಡವಪುರ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್. ಸಭಾಂಗಣದಲ್ಲಿ ಪಾಂಡವಪುರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಇವರ ಆಶ್ರಯದಲ್ಲಿ ಏರ್ಪಡಿಸಲಾಗಿರುವ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ನಾಗಮಂಗಲ – ಬೆಳ್ಳೂರು ಕ್ರಾಸ್-ಯಡಿಯೂರು – ಕುಣಿಗಲ್ – ನೆಲಮಂಗಲ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳಲಿದ್ದಾರೆ.
Enter