ನವದೆಹಲಿ: ವಿಜ್ಞಾನ ಭವನದಲ್ಲಿ ಇಂದು ಸೋಮವಾರ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಮುಖ್ಯಸ್ಥರೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಡೆಸುತ್ತಿರುವ ಸಭೆ ಪ್ರಗತಿಯಲ್ಲಿದೆ.
ಹಣಕಾಸು ಸಚಿವಾಲಯದ ಕಾರ್ಯದರ್ಶಿ ಡಾ. ವಿವೇಕ ಜೋಶಿ, ಕಲ್ಲಿದ್ದಲು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಎಂ.ನಾಗರಾಜು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಸಿಇಒಗಳು ಭಾಗವಹಿಸಿದ್ದಾರೆ.
ಸಭೆಯಲ್ಲಿ ಬ್ಯಾಂಕ್‌ಗಳ ಕಾರ್ಯಕ್ಷಮತೆ , ಪ್ರಮುಖ ಹಣಕಾಸಿನ ನಿರ್ವಹಣೆ ವಿವಿಧ ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಮೌಲ್ಯಮಾಪನ ಮಾಡುವುದು ಹಾಗೂ ದೇಶದ ಆರ್ಥಿಕ ಹಣಕಾಸಿನ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲಾಗುತ್ತಿದೆ. ಅಲ್ಲದೆ, ಠೇವಣಿ ಬೆಳವಣಿಗೆ, ಠೇವಣಿ ಅನುಪಾತಕ್ಕೆ ಸಾಲ ಸೌಲಭ್ಯ ಸೇರಿದಂತೆ ಬ್ಯಾಂಕ್ ಗಳ ಇತರೆ ವಹಿವಾಟುಗಳ ಕೇಂದ್ರೀಕರಿಸಿ, ಈ ಸಭೆ ನಡೆಯಲಿದೆ.
ಪ್ರಧಾನಮಂತ್ರಿ ಅವಾಸ್ ಯೋಜನೆ , ಪ್ರಧಾನಮಂತ್ರಿ ಸೂರ್ಯಘರ್ ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಸೇರಿದಂತೆ ಕೇಂದ್ರ ಸರ್ಕಾರದ ಇತರ ಯೋಜನೆಗಳ ಪ್ರಗತಿಯ ಕುರಿತು ಸಹ ನಿರ್ಮಲಾ ಸೀತಾರಾಮನ್ ಬ್ಯಾಂಕ್ ಗಳ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಲಿದ್ದಾರೆ.