ಹುಬ್ಬಳ್ಳಿ: ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಖಚಿತ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ನಲ್ಲಿ ಬಹುಮತ ಗೆದ್ದಿದ್ದೇವೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ೨೮ ಸ್ಥಾನ ಗೆಲ್ಲುತ್ತೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯಬೇಕಾಗುತ್ತದೆ. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಸಿದ್ದರಾಮಯ್ಯಗೆ ಬೇರೆ ಯಾರಿಂದಲೂ ಸಮಸ್ಯೆಯಿಲ್ಲ, ಅವರ ಪಕ್ಷದವರಿಂದಲೇ ಸಮಸ್ಯೆ ಎಂದು ಹೇಳಿದ್ದಾರೆ.
ಇದೇ ವೇಳೆ ಈಶ್ವರಪ್ಪ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ನಿಧಾನವಾಗಿ ಈಶ್ವರಪ್ಪ ಸಮಾಧಾನ ಆಗ್ತಾರೆ. ಚುನಾವಣೆಗೆ ಬಹಳ ಸಮಯ ಇರುವ ಕಾರಣಕ್ಕೆ ಕೆಲವೆಡೆ ಗೊಂದಲ ಇದೆ. ಲೋಕಸಭೆ ಚುನಾವಣೆ ಬೇರೆ, ವಿಧಾನಸಭೆ ಚುನಾವಣೆ ಬೇರೆ. ಲೋಕಸಭೆಯಲ್ಲಿ ಮೋದಿ ನೋಡಿ ಮತ ಹಾಕ್ತಾರೆ ಎಂದು ಜೋಶಿ ತಿಳಿಸಿದ್ದಾರೆ.