ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಸಮೀಪದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ, ಸಿದ್ಧಗೊಂಡ ಆಧುನಿಕ ಸೌಲಭ್ಯಗಳನ್ನು ಹೊಂದಿದ ಸಂಚಾರಿ ಶೌಚಗೃಹವನ್ನು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆಗಳ ಸಚಿವರಾದ ಪ್ರಿಯಾಂಕ್ ಖರ್ಗೆ ವೀಕ್ಷಿಸಿದರು.
ಗ್ರಾಮೀಣ ಭಾಗಗಳಲ್ಲಿ ಲಭ್ಯವಿರುವ ಸ್ಥಳಗಳಲ್ಲಿ ಈ ಶೌಚಾಲಯಗಳನ್ನು ಸುಲಭವಾಗಿ ಸ್ಥಾಪಿಸಬಹುದಾಗಿದ್ದು, ರಾಜ್ಯದ ವಿವಿದೆಡೆ ಇಂತಹ ಶೌಚಾಲಯಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಈ ಸಂದರ್ಭದಲ್ಲಿ ಹೇಳಿದರು. ಪ್ರಾಯೋಗಿಕವಾಗಿ ಇಂತಹ ಶೌಚಗೃಹಗಳನ್ನು ಕಲಬುರಗಿ ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕದ ಇತರೆಡೆ ಸ್ಥಾಪಿಸಲು ಈ ಶೌಚಗೃಹಗಳನ್ನು ನಿರ್ಮಾಣ ಮಾಡಿರುವ ಸಂಸ್ಥೆಗೆ ಸೂಚಿಸಲಾಗುವುದು ಎಂದೂ ಸಚಿವರು ತಿಳಿಸಿದರು.
ಸಚಿವರೊಂದಿಗೆ ಪಂಚಾಯತ್ ರಾಜ್ ಆಯುಕ್ತರಾದ ಶ್ರೀಮತಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ನರೇಗ ಆಯಕ್ತ ಪವನ್ ಕುಮಾರ್ ಮಾಲ್‌ಪಾಟೀಲ್, ಗ್ರಾಮೀಣ ನೀರು ಸರಬರಾಜು ಇಲಾಖೆಯ ಆಯುಕ್ತ ನಾಗೇಂದ್ರ ಪ್ರಸಾದ್, ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಕೆ.ಅನುರಾಧಾ ಇದ್ದರು.