ಮಂಗಳೂರು (ದಕ್ಷಿಣ ಕನ್ನಡ): ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾದ ಬಳಿಕ ಇಡೀ ದೇಶ, ಜಗತ್ತು ಸಂಭ್ರಮಿಸುತ್ತಿರುವ ಕಾಲಘಟ್ಟದಲ್ಲಿ ಸಚಿವ ರಾಜಣ್ಣ ನೀಡಿರುವುದು ಮೂರ್ಖತನದ ಹೇಳಿಕೆ. ಈ ಹೇಳಿಕೆ ಕಾಂಗ್ರೆಸ್ ನ ಮಾನಸಿಕತೆಯನ್ನು ತೋರಿಸುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರಲ್ಲಿ ರಾಮ ಮಂದಿರದ ಬಗ್ಗೆ ಸಚಿವ ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್, ಅಯೋಧ್ಯೆಯ ಹೋರಾಟದ ಸಂದರ್ಭ ಕಾಂಗ್ರೆಸ್ ಟೀಕೆಗಳನ್ನು ಮಾಡಿತ್ತು. ರಾಮನ ಹುಟ್ಟಿನ ಬಗ್ಗೆ ಪ್ರಶ್ನೆ ಮಾಡಿತ್ತು. ಕಾಂಗ್ರೆಸ್ ಗೆ ಈ ದೇಶದ ಸಂಸ್ಕೃತಿ ಬಗ್ಗೆ ಗೌರವ ಇಲ್ಲ, ಈ ದೇಶದ ಆದರ್ಶ ಪುರುಷ, ವೇದ ಪುರಾಣಗಳ ಬಗ್ಗೆಯೂ ನಂಬಿಕೆ ಇಲ್ಲ ಎಂದು ಟೀಕಿಸಿದರು.