Friday, April 11, 2025
Google search engine

Homeರಾಜಕೀಯಸಿಎಂ ಸ್ಥಾನಕ್ಕೆ ಅರ್ಹತೆ ಇದ್ದರೂ ಆಸೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಸಿಎಂ ಸ್ಥಾನಕ್ಕೆ ಅರ್ಹತೆ ಇದ್ದರೂ ಆಸೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನನ್ನ ಅನುಭವ, ಸೇವೆ ಹಾಗೂ ಹಿರಿತನದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಎಲ್ಲಾ ರೀತಿಯ ಅರ್ಹತೆ ನನಗಿದೆ. ಆದರೆ ಆ ಸ್ಥಾನದ ಆಕಾಂಕ್ಷಿ ನಾನಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ನಮ್ಮ ಪಕ್ಷದಲ್ಲಿ ಹೈಕಮಾಂಡ್ ಪ್ರಬಲವಾಗಿದೆ. ಯಾವುದೇ ಸಮಸ್ಯೆಗಳನ್ನೂ ಸಮರ್ಥವಾಗಿ ನಿಭಾಯಿಸಲಿದೆ. ಪ್ರತಿಯೊಬ್ಬ ರಾಜಕಾರಣಿಗೂ ರಾಜಕೀಯದಲ್ಲಿ ಮೇಲ್ಮಟ್ಟದ ಹುದ್ದೆಗಳನ್ನು ಅಲಂಕರಿಸಬೇಕೆಂಬ ಆಕಾಂಕ್ಷೆ ಇರುತ್ತದೆ ಅದು ಸಹಜ. ಆದರೆ ಅದಕ್ಕೆ ಸಮಯ ಕೂಡಿಬರಬೇಕಿದೆ ಎಂದಿದ್ದಾರೆ.

ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನವೂ ಖಾಲಿ ಇಲ್ಲ, ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಖಾಲಿ ಇಲ್ಲ. ಹಾಗಾಗಿ ಆ ಸ್ಥಾನಗಳ ಬಗ್ಗೆ ಅಪೇಕ್ಷೆ ವ್ಯಕ್ತಪಡಿಸುವುದು ಸರಿಯಲ್ಲ. ನಮ್ಮ ಹೈಕಮಾಂಡ್ ಈ ವಿಷಯಗಳಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದರು.

ಪಕ್ಷದ ವಿಚಾರದಲ್ಲಿ ಏನೇ ಇದ್ದರೂ ನಾಲ್ಕು ಗೋಡೆಗಳ ಮಧ್ಯೆ ಹೇಳಬೇಕು. ಏನಾದರೂ ಇದ್ದರೆ ಸುರ್ಜೆವಾಲಾ ಅವರಿಗೆ ಹೇಳಲಿ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಬಿಜೆಪಿ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ವಿವಾದ ಭುಗಿಲೆದ್ದಿದೆ. ಅವರಲ್ಲಿ ನಾಯಕತ್ವಕ್ಕೆ ಐದಾರು ಬಣಗಳು ಸೃಷ್ಟಿಯಾಗಿವೆ. ಈ ಗೊಂದಲವನ್ನು ನಿವಾರಿಸಲಾಗದೆ ಕಾಂಗ್ರೆಸ್ ಮತ್ತು ನಾಯಕರು ಮೇಲೆ ಇಲ್ಲಸಲ್ಲದ ಆರೋಪಗಳಲ್ಲಿ ತೊಡಗಿದ್ದಾರೆ ಎಂದರು.

ಪ್ರತಿಪಕ್ಷದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು, ವಿರೋಧ ಪಕ್ಷದ ನಾಯಕರು ಏನಾದರೂ ಹೇಳಲೇಬೇಕಲ್ಲವೇ ಅದಕ್ಕೆ ಹೇಳುತ್ತಾರೆ. ರಮೇಶ್ ಜಾರಕಿಹೊಳಿ ಅವರು ವಿಜಯೇಂದ್ರನ ಕೆಳಗಿಳಿಸಿ ಅಂದಿದ್ದಾರೆ. ನಿಮ್ಮದು ನೀವು ತೊಳೆದುಕೊಳ್ಳಿ, ಬೇರೆಯವರದು ಯಾಕೆ ತೊಳಿತಿರಾ? ತಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿರುವಾಗ ಬೇರೆಯವರ ತಟ್ಟೆಯಲ್ಲಿರುವ ನೊಣ ಯಾಕೆ ಹುಡುಕಬೇಕು ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

RELATED ARTICLES
- Advertisment -
Google search engine

Most Popular