Friday, April 4, 2025
Google search engine

Homeರಾಜ್ಯಬೈ ಎಲೆಕ್ಷನ್ ಗೆದ್ದ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ನಡೆಸುತ್ತಿರುವ ಸಚಿವ ಸತೀಶ್ ಜಾರಕಿಹೊಳಿ

ಬೈ ಎಲೆಕ್ಷನ್ ಗೆದ್ದ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ನಡೆಸುತ್ತಿರುವ ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು : ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕ್ಷೇತ್ರಗಳಲ್ಲೂ ಗೆದ್ದುಬೀಗಿದೆ. ಅದರಲ್ಲೂ ಚೆನ್ನಪಟ್ಟಣ ಮತ್ತು ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರ ಪುತ್ರರು ಸ್ಪರ್ಧಿಸಿದ್ದರು. ಆದರೂ ಕೂಡ ಕಾಂಗ್ರೆಸ್ ಅಭ್ಯರ್ಥಿಗಳು ಪ್ರಬಲ ಪೈಪೋಟಿ ನೀಡಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದು ಅಧ್ಯಕ್ಷ ಸ್ಥಾನಕ್ಕಾಗಿ ಸತೀಶ್ ಜಾರಕಿಹೊಳಿ ಲಾಬಿ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ದೆಹಲಿ ಮಟ್ಟದಲ್ಲಿ ಲಾಬಿ ನಡೆಸಲು ಸತೀಶ್ ಜಾರಕಿಹೊಳಿ ಪ್ಲಾನ್ ಮಾಡಿದ್ದಾರೆ. ಉಪಚುನಾವಣೆ ಗೆಲುವಿನ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಇದೀಗ ಕಣ್ಣು ನೆಟ್ಟಿದ್ದಾರೆ.

ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ. ಸಂಡೂರು, ಶಿಗ್ಗಾವಿಯಲ್ಲಿ ಎಸ್ ಟಿ ಮತಗಳು ನಿರ್ಣಾಯಕವಾಗಿದ್ದವು. ಹಾಗಾಗಿ ಎಸ್.ಟಿ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ನೀಡುವಂತೆ ಸತೀಶ್ ಜಾರಕಿಹೊಳಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮುಂದಿನ ವಾರ ದೆಹಲಿಗೆ ಸತೀಶ್ ಜಾರಕಿಹೊಳೆ ತೆರಳುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular