Friday, April 11, 2025
Google search engine

Homeರಾಜ್ಯಸರಿಗಮ ವಿಜಿ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಸಂತಾಪ

ಸರಿಗಮ ವಿಜಿ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಸಂತಾಪ

ಬೆಂಗಳೂರು: ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದ ಸರಿಗಮ ವಿಜಿ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಸರಿಗಮ ವಿಜಿ ಕನ್ನಡ ರಂಗಭೂಮಿ ಮತ್ತು ಚಲನಚಿತ್ರಗಳಲ್ಲಿ ಹಾಸ್ಯ ಕಲಾವಿದರಾಗಿ ,ತಂತ್ರಜ್ಞರಾಗಿ, ಸಹಾಯಕ ನಿರ್ದೇಶಕರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ಸಂಸಾರದಲ್ಲಿ ಸರಿಗಮ ನಾಟಕ ಅವರಿಗೆ ಅತ್ಯಂತ ಜನಪ್ರಿಯತೆ ತಂದು ಕೊಟ್ಟಿತು.

270ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದ ಸರಿಗಮ ವಿಜಿ ತಮ್ಮ ವಿಶಿಷ್ಟ ಹಾವ, ಭಾವ ಹಾಗೂ ಸಂಭಾಷಣೆಗಳ ಮೂಲಕ ಕನ್ನಡ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ.

ಅವರ ನಿಧನದಿಂದ ಕನ್ನಡ ರಂಗಭೂಮಿ ಮತ್ತು ಚಲನಚಿತ್ರ ಕ್ಷೇತ್ರ ಒಬ್ಬ ಅತ್ಯುತ್ತಮ ಕಲಾವಿದನನ್ನ ಕಳೆದುಕೊಂಡಂತಾಗಿದೆ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿ ಭಗವಂತನು ನೀಡಲಿ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular