Friday, April 4, 2025
Google search engine

Homeರಾಜ್ಯಮೈಸೂರಿನ ಅಶೋಕ ಪುರಂ ರೈಲ್ವೆ ನಿಲ್ದಾಣಕ್ಕೆ ಸಚಿವ ವಿ. ಸೋಮಣ್ಣ ಭೇಟಿ: ಪರಿಶೀಲನೆ

ಮೈಸೂರಿನ ಅಶೋಕ ಪುರಂ ರೈಲ್ವೆ ನಿಲ್ದಾಣಕ್ಕೆ ಸಚಿವ ವಿ. ಸೋಮಣ್ಣ ಭೇಟಿ: ಪರಿಶೀಲನೆ

ಮೈಸೂರು : ಭಾರತ ಸರ್ಕಾರದ ರೈಲ್ವೆ ರಾಜ್ಯ ಸಚಿವರು ಹಾಗೂ ಜಲ ಶಕ್ತಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಮೈಸೂರಿನ ಅಶೋಕ ಪುರಂ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರೈಲ್ವೆ ನಿಲ್ದಾಣದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನವೆಂಬರ್ 15 ರೊಳಗೆ ಪೂರ್ಣಗೊಳಿಸಬೇಕು. ಬೇರೆ ರಾಜ್ಯಗಳಿಂದ ಬಂದು ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಕನ್ನಡ ಕಲಿತುಕೊಳ್ಳಬೇಕು. ಇದರಿಂದ ಸಾರ್ವಜನಿಕರೊಂದಿಗೆ ಉತ್ತಮ ಸಂವಹನ ನಡೆಸಿ, ಉತ್ತಮ ಸೇವೆ ನೀಡಲು ಸಹಕಾರಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮೈಸೂರು ಕೊಡಗು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ ಸೇರಿದಂತೆ ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular