Sunday, April 20, 2025
Google search engine

Homeರಾಜ್ಯಸಚಿವರುಗಳು ಒಟ್ಟಾಗಿ ಊಟ ಮಾಡಿದ್ದೇವೆ ಹೊರತು ರಾಜಕೀಯ ಚರ್ಚೆಗಳೂ ನಡೆದಿಲ್ಲ: ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಸಚಿವರುಗಳು ಒಟ್ಟಾಗಿ ಊಟ ಮಾಡಿದ್ದೇವೆ ಹೊರತು ರಾಜಕೀಯ ಚರ್ಚೆಗಳೂ ನಡೆದಿಲ್ಲ: ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಚಿಕ್ಕಮಗಳೂರು: ದಸರಾಕ್ಕೆ ಮೈಸೂರಿಗೆ ಹೋಗಿದ್ದ ವೇಳೆ ಸಹಜವಾಗಿ ಸಚಿವರುಗಳು ಒಟ್ಟಾಗಿ ಊಟ ಮಾಡಿದ್ದೇವೆ. ಹೊರತು ಅದರಲ್ಲಿ ವಿಶೇಷ ಏನು ಇಲ್ಲ. ಯಾವುದೇ ರಾಜಕೀಯ ಚರ್ಚೆಗಳೂ ನಡೆದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಯಾವ ಸಭೆಯೂ ಇಲ್ಲ. ಸಚಿವ ಎಚ್.ಸಿ.ಮಹದೇವಪ್ಪ ಮನೆ ಮತ್ತು ನಮ್ಮ ಮನೆ ಅಕ್ಕಪಕ್ಕದಲ್ಲೇ ಇವೆ. ಆಗಾಗ ಭೇಟಿಯಾಗುತ್ತೇವೆ. ಇದರಲ್ಲಿ ವಿಶೇಷ ಏನೂ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆ ಇಲ್ಲ ಎಂದು ಹೇಳಿದರು.

ಸರ್ಕಾರ ಬೀಳಲಿದೆ ಎಂದು ಬಿಜೆಪಿಯವರು ಹೇಳುತ್ತಲೇ ಇದ್ದಾರೆ. ಅದಕ್ಕೆ ಮಹತ್ವ ಕೊಡುವ ಅಗತ್ಯವಿಲ್ಲ. ಜಾತಿಗಣತಿ ವಿಷಯ ಸಚಿವ ಸಂಪುಟಕ್ಕೆ ಬರಲಿದ್ದು, ಅಲ್ಲಿ ಚರ್ಚೆಯಾಗಲಿದೆ. ಈ ಬಗ್ಗೆ ಏನನ್ನೂ ಹೇಳುವುದಿಲ್ಲ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular