Friday, April 11, 2025
Google search engine

Homeಅಪರಾಧಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ: ಟ್ಯೂಷನ್ ಶಿಕ್ಷಕನ ಬಂಧನ

ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ: ಟ್ಯೂಷನ್ ಶಿಕ್ಷಕನ ಬಂಧನ

ಮಂಡ್ಯ: ಎರಡು ತಿಂಗಳ ಹಿಂದೆ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಟ್ಯೂಷನ್ ಶಿಕ್ಷಕನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಟ್ಯೂಷನ್ ಶಿಕ್ಷಕ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಆರೋಪಿಯು ವಿವಾಹಿತನಾಗಿದ್ದು, ಎರಡು ವರ್ಷದ ಮಗುವಿದೆ ಎಂದು ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ.

ನವೆಂಬರ್ 23 ರಂದು ಅಪ್ರಾಪ್ತ ಬಾಲಕಿಯನ್ನು ಅಪಹರಿಸಲಾಗಿತ್ತು. ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಉಪ ಪೊಲೀಸ್ ಆಯುಕ್ತ (ಬೆಂಗಳೂರು ದಕ್ಷಿಣ ವಿಭಾಗ) ಲೋಕೇಶ್ ಬಿಜೆ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಿಂದ ಜನವರಿ 5 ರಂದು ಬಾಲಕಿಯನ್ನು ರಕ್ಷಿಸಲಾಗಿತ್ತು. ಆಕೆಯನ್ನು ಆಕೆ ಪ್ರತಿ ದಿನ ಟ್ಯೂಷನ್​ಗೆ ತೆರಳುತ್ತಿದ್ದ ಟ್ಯೂಷನ್ ಶಿಕ್ಷಕನೇ ಅಪಹರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು 25 ವರ್ಷ ವಯಸ್ಸಿನವನಾಗಿದ್ದು, ಆತನನ್ನು ಬಂಧಿಸಲಾಗಿದೆ. ಆತನ ವಿರುದ್ಧ ಅಪಹರಣ ಮತ್ತು ಅತ್ಯಾಚಾರದ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular