ಕಲಬುರ್ಗಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಕಲ್ಬುರ್ಗಿಯಲ್ಲಿ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ.ಈ ಕುರಿತು ಕಲ್ಬುರ್ಗಿಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಆರೈಕೆಗೆ ಅಪ್ರಾಪ್ತ ಬಾಲಕಿ ಬಂದಿದ್ದಳು. ತಾಯಿ ದಿವ್ಯಂಗ ಹಿನ್ನೆಲೆಯಲ್ಲಿ ಬಾಲಕಿ ತಂದೆಯ ಆರೈಕೆಗಾಗಿ ಆಸ್ಪತ್ರೆಗೆ ಬಂದಿದ್ದಾಳೆ.ಈ ವೇಳೆ ಸ್ವಚ್ಛತಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಬಾಲಕಿಯ ಆರ್ಥಿಕ ಪರಿಸ್ಥಿತಿ ದುರುಪಯೋಗಪಡಿಸಿಕೊಂಡು ಸಿಬ್ಬಂದಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ವೈದ್ಯಕೀಯ ಕಾಲೇಜಿನ ವಿಶ್ರಾಂತಿ ಕೊಠಡಿಗೆ ಕರೆದೋಯ್ದು ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಎಸಗಿದ್ದ ಸಂಪತ್ ಕೆವಡೆ ಕರ್ನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.