Saturday, April 19, 2025
Google search engine

Homeರಾಜ್ಯಸುದ್ದಿಜಾಲಕೆ.ವಿವೇಕಾನಂದ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಮಿರ್ಲೆಶ್ರೀನಿವಾಸಗೌಡ

ಕೆ.ವಿವೇಕಾನಂದ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಮಿರ್ಲೆಶ್ರೀನಿವಾಸಗೌಡ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ಜೂ.೩ರಂದು ನಡೆಯುವ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ಕೆ.ವಿವೇಕಾನಂದ ಅವರು ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಜಯಗಳಿಸಲಿದ್ದಾರೆ ಎಂದು ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆಶ್ರೀನಿವಾಸಗೌಡ ಹೇಳಿದರು.

ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರನ್ನು ಭೇಟಿಯಾಗಿ ಎನ್‌ಡಿಎ ಅಭ್ಯರ್ಥಿ ಪರವಾಗಿ ಮತ ಯಾಚಿಸಿ ಮತನಾಡಿದ ಅವರು ಬಿಜೆಪಿ ಮತ್ತು ಜೆಡಿಎಸ್ ಸರ್ಕಾರಗಳು ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಅತಿಹೆಚ್ಚು ಆದ್ಯತೆ ಮತ್ತು ಮಾನ್ಯತೆ ನೀಡಿದ್ದು ಇವು ನಮ್ಮ ಗೆಲುವಿಗೆ ಸಹಕಾರಿಯಾಗಲಿವೆ ಎಂದರು.

ಸರ್ಕಾರಿ ನೌಕರರು ಮತ್ತು ಪಧವೀಧರರ ಅನುಕೂಲಕ್ಕೆ ಎರಡು ಸರ್ಕಾರಗಳು ಉತ್ತಮವಾಗಿ ಕೆಲಸ ಮಾಡಿದ್ದು ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಳ ಮಾಡುವುದರ ಜತೆಗೆ ವೈದ್ಯಕೀಯ, ಇಂಜಿನಿಯರಿಗ್ ಕಾಲೇಜುಗಳನ್ನು ತೆರೆದು ರಾಜ್ಯಾದ್ಯಂತ ಸಾವಿರಾರು ಪ್ರೌಢಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಿದ ಕೀರ್ತಿ ನಮಗೆ ಸಲ್ಲುತ್ತದೆ ಎಂದುತಿಳಿಸಿದರು.

ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರುಗಳು ಪ್ರ‍್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದು ನಾವು ಪ್ರಚಾರಕ್ಕೆ ಹೋದೆಡೆಯಲ್ಲೆಲ್ಲಾ ಉಪನ್ಯಾಸಕರಿಂದ ಉತ್ತಮವಾದ ಬೆಂಬಲ ಮತ್ತು ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಇದು ನಮಗೆ ಗೆಲುವಿನ ಮುನ್ಸೂಚನೆ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸರ್ಕಾರಿ ನೌಕರರನ್ನು ಕಾಲ ಕಸದಂತೆ ಕಾಣುತ್ತಿದ್ದು ಈ ಚುನಾವಣೆಯಲ್ಲಿ ಉಪನ್ಯಾಸಕರು ಮತ್ತು ಪ್ರಬುದ್ದ ಶಿಕ್ಷಕ ಮತದಾರರು ಅದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ ಅವರು ಕಾಂಗ್ರೆಸ್ ಪಕ್ಷ ದಕ್ಷಿಣ ಶಿಕ್ಷಣ ಕ್ಷೇತ್ರದಲ್ಲಿ ಇತಿಹಾಸದಲ್ಲಿ ಒಮ್ಮೆಯೂ ಜಯ ಸಾಧಿಸಿಲ್ಲ ಈ ಬಾರಿಯೂ ಕಾಂಗ್ರೆಸಿಗರ ಕನಸು ನನಸಾಗುವುದಿಲ್ಲವೆಂದು ವ್ಯಂಗ್ಯವಾಡಿದರು.

ಸರಿಯಾಗಿ ಕನ್ನಡವನ್ನು ಓದಲು ಬಾರದ ಶಿಕ್ಷಣ ಸಚಿವರು ನಮ್ಮ ರಾಜ್ಯದಲ್ಲಿದ್ದು ಇದರಿಂದ ಉತ್ತಮ ಶೈಕ್ಷಣಿಕ ಬದಲಾವಣೆ ನಿರೀಕ್ಷಿಸುವುದು ಸಾಧ್ಯವಿಲ್ಲವೆಂದ ಮಿರ್ಲೆಶ್ರೀನಿವಾಸಗೌಡ ಸರ್ಕಾರ ಕೂಡಲೇ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರನ್ನು ಸಂಪುಟದಿದ ವಜಾಮಾಡಿ ಸಮರ್ಥರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಹೆಚ್.ಡಿ.ಪ್ರಭಾಕರ್‌ಜೈನ್, ಸಾಲಿಗ್ರಾಮ ತಾಲೂಕು ಜೆಡಿಎಸ್ ಅಧ್ಯಕ್ಷ ಮೆಡಿಕಲ್ ರಾಜಣ್ಣ, ತಾಲೂಕು ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್, ಜೆಡಿಎಸ್ ಮುಖಂಡ ಮಿರ್ಲೆರಾಧಾಕೃಷ್ಣ, ಶಿಕ್ಷಕ ಮಿರ್ಲೆಧನಂಜಯ ಮತ್ತು ಪ್ರಾಂಶುಪಾಲ ಬಿ.ಟಿ.ವಿಜಯ್ ಮತ್ತಿತರರು ಇದ್ದರು.

RELATED ARTICLES
- Advertisment -
Google search engine

Most Popular