ಬೆಂಗಳೂರು: ಕರ್ನಾಟಕ ಮಹರ್ಷಿ ವಾರ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಸುಮಾರು 5 ಕೋಟಿ ಮೌಲ್ಯದ ಹಲವರ ಆಸ್ತಿ-ಪಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಮೂಲಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರದಲ್ಲಿ ಭಾಗಿಯಾದವರಿಗೆ ಇಡಿ ಬಿಗ್ ಶಾಕ್ ನೀಡಿದೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಇಡಿಯು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ (KMVSTDCL) ಪ್ರಕರಣದಲ್ಲಿ, PMLA, 2002 ರ ನಿಬಂಧನೆಗಳ ಅಡಿಯಲ್ಲಿ ಬೆಂಗಳೂರಿನ ED, ಸ್ಥಿರ ಆಸ್ತಿಗಳು ಮತ್ತು ಬ್ಯಾಂಕ್ ಬ್ಯಾಲೆನ್ಸ್ ರೂಪದಲ್ಲಿ 5 ಕೋಟಿ ರೂ. (ಅಂದಾಜು) ವರೆಗಿನ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ತಿಳಿಸಿದೆ.
ಅಂದಹಾಗೇ ಜಾರಿ ನಿರ್ದೇಶನಾಲಯದಿಂದ ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಗೋಲಪಲ್ಲಿ ಕಿಶೋರ ರೆಡ್ಡಿ, ನೆಕ್ಕುಂಟಿ ನಾಗರಾಜ್, ಎಟಕೇರಿ ಸತ್ಯನಾರಾಯಣ, ಚಂದ್ರಮೋಹನ್ ಅವರುಗಳಿಗೆ ಸೇರಿದಂತ 4.45 ಕೋಟಿ ಮೌಲ್ಯದ ಭೂಮಿ, ಫ್ಲಾಟ್ ಹಾಗೂ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಇದ್ದಂತ 50 ಲಕ್ಷ ನಗದನ್ನು ಜಪ್ತಿ ಮಾಡಲಾಗಿದೆ.