Friday, April 4, 2025
Google search engine

Homeಅಪರಾಧಕಾನೂನುಹಣ ದುರ್ಬಳಕೆ: ವಾಲ್ಮೀಕಿ ಹಗರಣ ಸಿಬಿಐಗೆ; ಇಂದು ಹೈಕೋರ್ಟ್‌ ತೀರ್ಪು

ಹಣ ದುರ್ಬಳಕೆ: ವಾಲ್ಮೀಕಿ ಹಗರಣ ಸಿಬಿಐಗೆ; ಇಂದು ಹೈಕೋರ್ಟ್‌ ತೀರ್ಪು

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯ ಕುರಿತು ಹೈಕೋರ್ಟ್‌ ಮಂಗಳವಾರ ತನ್ನ ತೀರ್ಪು ಪ್ರಕಟಿಸಲಿದೆ.

ಈ ವಿಚಾರವಾಗಿ ಬ್ಯಾಂಕ್‌ ಸಲ್ಲಿಸಿರುವ ಅರ್ಜಿಯ ಕುರಿತು ವಾದ- ಪ್ರತಿವಾದ ಆಲಿಸಿ ವಿಚಾರಣೆಯನ್ನು ಸೆ. 30ಕ್ಕೆ ಪೂರ್ಣಗೊಳಿಸಿದ್ದ ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ತೀರ್ಪನ್ನು ಕಾಯ್ದಿರಿಸಿತ್ತು.

ಈ ಪ್ರಕರಣವು ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ವಿವಾದ ಎಂದು ಅದನ್ನು ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್‌ ನಿರ್ಧರಿಸಬೇಕೇ ಮತ್ತು ಆರ್‌ಬಿಐಯ ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯ ಸೆಕ್ಷನ್‌ 35ಎ ಅಡಿ ಹೊರಡಿಸಿರುವ ಮಾಸ್ಟರ್‌ ಸುತ್ತೋಲೆಯ ಪ್ರಕಾರ ನಿರ್ದಿಷ್ಟ ಮೊತ್ತದ ಹಣಕಾಸು ಅವ್ಯವಹಾರವನ್ನು ಸಿಬಿಐ ತನಿಖೆ ನಡೆಸಬೇಕೇ ಎಂಬ ವಿಷಯಗಳಿಗೆ ಉತ್ತರಿಸುವ ಮೂಲಕ ಅರ್ಜಿಯ ಊರ್ಜಿತತ್ವ ನಿರ್ಧರಿಸಲಾಗುವುದು ಎಂದು ನ್ಯಾಯಪೀಠ ಹೇಳಿತ್ತು. ಅರ್ಜಿಯ ಸಿಂಧುತ್ವದ ಬಗ್ಗೆ ಪ್ರಾಥಮಿಕ ಪ್ರಶ್ನೆ ಇದೆ, ಏಕೆಂದರೆ ಇದು ರಾಜ್ಯ ಮತ್ತು ಕೇಂದ್ರ ಸರಕಾರಗಳ ನಡುವಣ ವ್ಯಾಜ್ಯವಾಗಿದೆ ಎಂದು ರಾಜ್ಯ ಸರಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಬ್ಯಾಂಕ್‌ ವಾದ ಏನು?
ಇಡೀ ಬ್ಯಾಂಕಿಂಗ್‌ ವಲಯದ ಪ್ರಾಮಾಣಿಕತೆಯನ್ನು ಖಾತರಿಪಡಿಸಲು ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ರೂ. ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿದೆ ಎಂದು ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾ ಪ್ರಬಲವಾಗಿ ವಾದಿಸಿದೆ.

RELATED ARTICLES
- Advertisment -
Google search engine

Most Popular