Friday, April 11, 2025
Google search engine

Homeರಾಜ್ಯಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ!

ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ!

ಕಾಸರಗೋಡು : ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಸ್ವಾಮೀಜಿಯವರ ಮೇಲಿನ ಹಲ್ಲೆಯನ್ನು ಖಂಡಿಸಿ, ಇದೀಗ ಹಿಂದೂ ಪರ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ.

ಸ್ವಾಮೀಜಿಗಳು ಕಾರ್ಯಕ್ರಮ ಮುಗಿಸಿ ಮನೆಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅವರ ಕಾರಿನ ಮೇಲೆ ಅಟ್ಯಾಕ್ ಮಾಡಿದ್ದಾರೆ. ಸ್ವಾಮೀಜಿಗಳ ಮೇಲೆ ಹಲ್ಲೆಯನ್ನು ಹಿಂದೂಪರ ಸಂಘಟನೆಗಳು ಘಟನೆಯನ್ನು ಖಂಡಿಸಿದ್ದಾರೆ. ಬೋವಿಕಾನದಲ್ಲಿ ಪ್ರತಿಭಟನೆಗೆ ಹಿಂದೂ ಐಕ್ಯ ವೇದಿಕೆ ಕರೆ ನೀಡಿದೆ.ದಾಳಿಯ ಕುರಿತು ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ ಸಚ್ಚಿದಾನಂದ ಭಾರತಿ ಶ್ರೀಗಳಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಮನವಿ ಮಾಡಲಾಗಿದೆ.

ಸ್ವಾಮೀಜಿ ಮೇಲಿನ ದಾಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಕೇರಳ ಸರ್ಕಾರವನ್ನು ಆಗ್ರಹಿಸಲಾಗಿದೆ. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಶ್ರೀಪಾದರ ವಾಹನಕ್ಕೆ ಕಾಸರಗೋಡು ಬೊವಿಕ್ಕಾನದಲ್ಲಿ ಸಮಾಜಘಾತುಕ ಶಕ್ತಿಗಳು ಅಡ್ಡಿಪಡಿಸಿ ಹಾನಿ ಮಾಡಿರುವುದನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಭರತ್ ಶೆಟ್ಟಿ ತೀವ್ರವಾಗಿ ಖಂಡಿಸಿದ್ದಾರೆ.

RELATED ARTICLES
- Advertisment -
Google search engine

Most Popular