ಮಂಗಳೂರು (ದಕ್ಷಿಣ ಕನ್ನಡ): ಸಾಮಾಜಿಕ ಜಾಲತಾಣದಲ್ಲಿ ಮಂಗಳೂರು ನಗರದ ಕೂಳೂರು ಸೇತುವೆ ಬಳಿ ದರ್ಪ ಮೆರೆದ ಸಂಚಾರ ಪೊಲೀಸರು ಎಂದು ವಿಡಿಯೋ ಒಂದು ಹರಿದಾಡುತ್ತಿದೆ. ಈ ವಿಡಿಯೋದಲ್ಲಿನ ದೃಶ್ಯವು ದಿನಾಂಕಃ 23-12-2024 ರಂದು ಕುದ್ರೆಮುಖ ಜಂಕ್ಷನ್‌ನಲ್ಲಿ ನಡೆದಿದೆ. ಪಾನಮತ್ತನಾದ ಓರ್ವ ವ್ಯಕ್ತಿಯೂ ಕುದ್ರೆಮುಖ ಜಂಕ್ಷನ್ ನಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯುಂಟು ಮಾಡುತ್ತಿದ್ದು, ಸಾರ್ವಜನಿಕರ ಸಹಾಯದೊಂದಿಗೆ ಪೊಲೀಸರು ಸದರಿ ವ್ಯಕ್ತಿಯನ್ನು ಬದಿಗೆ ಕಳುಹಿಸಿದ್ದರೂ ಸದ್ರಿ ವ್ಯಕ್ತಿ ಪದೇ ಪದೇ ರಸ್ತೆಗೆ ಬಂದು ವಾಹನ ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿರುವ ಸಮಯ ತುಂಬಾ ಕುಡಿದಿದ್ದರಿಂದ ಆಯತಪ್ಪಿ ಕೆಳಗೆ ಬಿದ್ದು ಆತನಿಗೆ ಮೂಗಿನಲ್ಲಿ ರಕ್ತ ಬಂದಿರುತ್ತದೆ. ಆ ಸಮಯ ಪೊಲೀಸರು ಸಾರ್ವಜನಿಕರ ಸಹಾಯದೊಂದಿಗೆ ವ್ಯಕ್ತಿಯನ್ನು ಮೇಲಕ್ಕೆತ್ತಿ ಉಪಚರಿಸಿ ಆಸ್ಪತ್ರೆಗೆ ಸಾಗಿಸಲು ವಾಹನದ ಬಳಿ ಕರೆದುಕೊಂಡು ಬರುತ್ತಿರುವಾಗ ಯಾರೋ ಸಾರ್ವಜನಿಕರು ತಪ್ಪಾಗಿ ತಿಳಿದುಕೊಂಡು ವಿಡಿಯೋ ವೈರಲ್ ಮಾಡಿರುವುದಾಗಿದೆ ಎಂದು ಇಂದು ಮಂಗಳೂರು ನಗರದ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.