ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ, ಇಡಿ ಮತ್ತು ಸಿಬಿಐನಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದು, ಪ್ರತಿಪಕ್ಷಗಳಿಗೆ ಕಿರುಕುಳ ನೀಡಲು ಐಟಿ ಇಲಾಖೆಯನ್ನು ಏಕೆ ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಪ್ರಶ್ನಿಸಿದರು. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಇಂತಹ ಕ್ರಮಗಳಿಂದ ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ದುರುಪಯೋಗ ಪಡಿಸಿಕೊಂಡ ಸಂಸ್ಥೆಗಳನ್ನು ಬಿಜೆಪಿಯ ಸರ್ವಾಧಿಕಾರತ್ವದಿಂದ ಮುಕ್ತಿಗೊಳಿಸುತ್ತೇವೆ ಎಂದು ಪ್ರತಿಜ್ಞೆ ಮಾಡಿದರು.
ಕಾಂಗ್ರೆಸ್ ಎಂದಿಗೂ ಹೆದರುವುದಿಲ್ಲ! ನಾವು ನಮ್ಮ ಸಂಪೂರ್ಣ ಶಕ್ತಿಯಿಂದ ಚುನಾವಣೆಯನ್ನು ಎದುರಿಸುತ್ತೇವೆ ಎಂದ ಅವರು, ಲೋಕಸಭೆ ಚುನಾವಣೆಗೆ ಮುನ್ನವೇ ಜಾರಿಯಾಗಿರುವುದು ಹಲವು ವರ್ಷಗಳ ಹಿಂದಿನ ಈ ಐಟಿ ನೋಟೀಸ್‌ಗಳು, ಬಿಜೆಪಿಯ ಷಡ್ಯಂತ್ರವನ್ನು ಸಾಬೀತುಪಡಿಸುತ್ತದೆಯೇ ಎಂದು ಹೇಳಿದರು.