ಕೋಲ್ಕತ್ತಾ: ಭಾರತೀಯ ಚಿತ್ರರಂಗದ ಹಿರಿಯ ನಟ ಮಿಥುನ್ ಚಕ್ರವರ್ತಿ(೭೩) ಅವರು ಅಸ್ವಸ್ಥಗೊಂಡಿದ್ದು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎದೆನೋವು ಕಾಣಿಸಿಕೊಂಡ ಕಾರಣ ಅವರನ್ನು ಇಲ್ಲಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ನೀಡಿರುವ ಮಾಹಿತಿ ಪ್ರಕಾರ, ಅವರು ಮೆದುಳಿನ ಸ್ಟ್ರೋಕ್‌ಗೆ ಒಳಗಾಗಿದ್ದಾರೆ. ಪ್ರಸ್ತುತ ಸಂಪೂರ್ಣ ಪ್ರಜ್ಞಾವಸ್ಥೆಯಲ್ಲಿದ್ದಾರೆ.
ಮಿಥುನ್ ಚಕ್ರವರ್ತಿ ಅವರು ಬಲಗೈ ಮತ್ತು ಎಡಗಾಲಿನಲ್ಲಿ ದೌರ್ಬಲ್ಯ ಹೊಂದಿರುವುದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೆದುಳಿನ ಎಂಆರ್‌ಐ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ. ಸ್ಟ್ರೋಕ್ ಗೆ ಒಳಗಾಗಿರುವುದನ್ನು ಈ ಪರೀಕ್ಷೆಗಳು ದೃಢೀಕರಿಸಿವೆ. ಪ್ರಜ್ಞಾವಸ್ಥೆಯಲ್ಲಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಸೂಕ್ತ ಆಹಾರ ಕ್ರಮ ಪಾಲಿಸುತ್ತಿದ್ದಾರೆ. ನರ ವೈದ್ಯರು, ಹೃದ್ರೋಗ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್‌ಗಳು ಸೇರಿದಂತೆ ಪರಿಣತ ತಜ್ಞರು ನಿಗಾ ಇಟ್ಟಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.