ಮಂಡ್ಯ: ಶಾಸಕ ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಹಿನ್ನೆಲೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ಮಂಡ್ಯದ ಸಂಜಯ್ ಸರ್ಕಲ್’ನಲ್ಲಿ ವಿಜಯೇಂದ್ರ ಭಾವಚಿತ್ರಕ್ಕೆ ಈಡುಗಾಯಿ ಒಡೆದು, ಹಾಲಿನ ಅಭಿಷೇಕ ಮಾಡಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದ್ದಾರೆ.

ವಿಜಯೇಂದ್ರ ಪರ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಿಂದೆ ಭುಜ ತಟ್ಟಿ ಮಾತಾಡ್ತಿದ್ರು. ನಾವು ಇದೀಗ ತೊಡೆ ತಟ್ಟಿ ಸವಾಲು ಹಾಕ್ತೀವಿ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28ಕ್ಕೆ 28 ಕ್ಷೇತ್ರದಲ್ಲಿ ಬಿಜೆಪಿ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಗೆಲ್ಲುತ್ತೆ ಎಂದು ಹೇಳಿದರು.