ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಅಭಯಾರಣ್ಯಕ್ಕೆ ಹೊಂದಿಕೊಂಡಂತಿರುವ ಆಡಿನಕಣಿವೆಯಲ್ಲಿ ಇತ್ತೀಚೆಗೆ ಹುಲಿ ದಾಳಿಗೆ ಸಿಲುಕಿ ಮೃತಪಟ್ಟ ಬಸವಯ್ಯ ಕುಟುಂಬಸ್ಥರಿಗೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಸಾಂತ್ವನ ಹೇಳಿ, ಧನ ಸಹಾಯ ಮಾಡಿದರು.
ತಾಲೂಕಿನ ಆಡಿನಕಣಿವೆ ಗ್ರಾಮಕ್ಕೆ ತೆರಳಿದ ಶಾಸಕ ಎಚ್.ಎಂ.ಗಣೇಶಪ್ರಸಾದ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಎಚ್.ಎಸ್.ಮಹದೇವಪ್ರಸಾದ್ ಟ್ರಸ್ಟ್ ವತಿಯಿಂದ ವೈಯಕ್ತಿಕವಾಗಿ ಸಹಾಯ ಮಾಡಲಾಗಿದೆ. ಈ ಸಂಬಂಧ ಅರಣ್ಯ ಇಲಾಖೆ ಹಾಗೂ ಸರ್ಕಾರದ ಗಮನಕ್ಕೆ ತಂದು ಸೂಕ್ತ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು.
ಈ ವೇಳೆ ಗ್ರಾಮಸ್ಥರು, ಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಹಾವಳಿ ಹೆಚ್ಚಿನ ರೀತಿಯಲ್ಲಿದ್ದು, ಇದಕ್ಕೆ ಕಡಿವಾಣ ಜೀವ ರಕ್ಷಣೆ ನೀಡಬೇಕೆಂದು ಶಾಸಕರ ಬಳಿ ಒತ್ತಾಯಿಸಿದರು. ಶಾಸಕರು ಪ್ರತಿಕ್ರಿಯೆ ನೀಡಿ, ಸೂಕ್ತ ಕ್ರಮ ವಹಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಕುಂದಕರೆ ವಲಯ ಅರಣ್ಯಾಧಿಕಾರಿ ನವೀನ್ ಕುಮಾರ್ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗು ಗ್ರಾಮಸ್ಥರು ಹಾಜರಿದ್ದರು.