Thursday, April 3, 2025
Google search engine

Homeಆರೋಗ್ಯನೂತನ ಡಯಾಲಿಸಿಸ್ ಯೂನಿಟ್ ಘಟಕ ಉದ್ಘಾಟಿಸಿದ ಶಾಸಕ ಡಿ.ರವಿಶಂಕರ್

ನೂತನ ಡಯಾಲಿಸಿಸ್ ಯೂನಿಟ್ ಘಟಕ ಉದ್ಘಾಟಿಸಿದ ಶಾಸಕ ಡಿ.ರವಿಶಂಕರ್

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ಮಹಿಳಾ ಮತ್ತು ಮಕ್ಕಳ ಹಾಗೂ ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆಯುಳ್ಳ ಸಾರ್ವಜನಿಕ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಸರಕಾರದಿಂದ ಸುಮಾರು 65 ಕೋಟಿ ರೂಗಳ ಅನುದಾನ ಬಜೆಟ್ ನಲ್ಲಿ ಬಿಡುಗಡೆಯಾಗಲಿದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಸಾಲಿಗ್ರಾಮ ಪಟ್ಟಣದ ಸಾರ್ವಜನಿಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಡಯಾಲಿಸಿಸ್ ಯೂನಿಟ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದ ಬಡ ಜನರ ಅನುಕೂಲಕ್ಕಾಗಿ ಪ್ರತಿಯೊಂದು ತಾಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಕೇಂದ್ರ ಪ್ರಾರಂಭ ಮಾಡುವುದರೊಂದಿಗೆ ಬಡವರಿಗೆ ಅನುಕೂಲವಾಗಲಿ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೂರದೃಷ್ಟಿಯಿಂದ ಸಾಲಿಗ್ರಾಮ ಆಸ್ಪತ್ರೆಯಲ್ಲಿ ನೂತನವಾಗಿ ಡಯಾಲಿಸಿಸ್‌ ಕೇಂದ್ರ ಪ್ರಾರಂಭಿಸಲಾಗಿದೆ. ತಾಲೂಕಿನಲ್ಲಿ ಮೂತ್ರಕೋಶದ ತೊಂದರೆ ಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಈ ಕೇಂದ್ರ ಹೆಚ್ಚು ಅನುಕೂಲವಾಗಲಿದೆ. ಕೇಂದ್ರಕ್ಕೆ ಅಗತ್ಯವಿರುವ ಸೌಲಭ್ಯ ಹಾಗೂ ಸಿಬ್ಬಂದಿಯನ್ನು ಒದಗಿಸಲಾಗಿದ್ದು, ಅಗತ್ಯ ವಿರುವವರು ಇದರ ಸದುಪಯೋಗ ಮಾಡಿಕೊಂಡು ಆರೋಗ್ಯ ಸುಧಾರಿಸಿ ಕೊಳ್ಳಬೇಕು ಎಂದು ಹೇಳಿದರು.

ಸಾಲಿಗ್ರಾಮ ಪಟ್ಟಣದ ಸಾರ್ವಜನಿಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಡಯಾಲಿಸಿಸ್ ಯೂನಿಟ್ ಘಟಕವನ್ನು ಶಾಸಕ ಡಿ.ರವಿಶಂಕರ್ ಉದ್ಘಾಟಿಸಿ ರೋಗಿಯ ಆರೋಗ್ಯ ವಿಚಾರಿಸಿದರು.

ಇತ್ತೀಚಿನ ದಿನಗಳಲ್ಲಿ ಕಿಡ್ನಿ ವೈಫಲ್ಯ, ವಿಷಪ್ರಾಶನ, ನರರೋಗಗಳಿಗೆ ಸಂಬಂಧಿಸಿದಂತೆ ಹಾಗೂ ಇನ್ನಿತರ ರೋಗಗಳ ಚಿಕಿತ್ಸೆಗೆ ಸಾಲಿಗ್ರಾಮ ಮತ್ತು ಸುತ್ತಮುತ್ತಲ ರೋಗಿಗಳು ಡಯಾಲಿಸಿಸ್‌ಗಾಗಿ ಕೃಷ್ಣರಾಜನಗರ, ಹೊಳೆನರಸೀಪುರ, ಹಾಸನ, ಮೈಸೂರು ನಗರಗಳಿಗೆ ತೆರಳಿ ಸೇವೆ ಪಡೆಯುವಂತಾಗಿತ್ತು. ಇದನ್ನ ಮನಗೊಂಡು ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿತ್ತು ಮನವಿ ಸ್ಪಂದಿಸುವ ಮೂಲಕ ಇಂದು ಡಯಾಲಿಸಿಸ್‌ ಎರಡು ಯೂನಿಟ್ ಗಳು ಈಗ ಇಲ್ಲಿ ಕಾರ್ಯನಿರ್ವಹಿಸುವುದರಿಂದ ಈ ಭಾಗದ ಬಡ ರೋಗಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದ ಅವರು, ತಾಲೂಕು ಕೇಂದ್ರಕ್ಕೆ ಅಗತ್ಯವಿರುವ ತಾಲೂಕು ಕಚೇರಿ, ತಾಲೂಕು ಪಂಚಾಯಿತಿ ಸೇರಿದಂತೆ ಇನ್ನಿತರ ಇಲಾಖೆಯ ಕಟ್ಟಡಗಳ ನಿರ್ಮಾಣಕ್ಕೆ ಸರಕಾರದಿಂದ ಅನುದಾನ ನೀಡುತ್ತಿದ್ದು ಇದರ ಜತೆಗೆ ಪಟ್ಟಣಕ್ಕೆ ಮೂಲ ಸೌಕರ್ಯ ಗಳನ್ನು ಒದಗಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪಿ.ಸಿ ಕುಮಾರಸ್ವಾಮಿ, ತಾಲೂಕು ವೈದ್ಯಾಧಿಕಾರಿ ಡಾ.ನಟರಾಜು, ತಹಸೀಲ್ದಾರ್ ನರಗುಂದ, ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ಡಾ. ಅಶೋಕ್, ಗ್ರಾ.ಪಂ ಅಧ್ಯಕ್ಷೆ ಸುವರ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯ್ ಶಂಕರ್, ಪಾಲಕ್ಷ, ಅಶ್ವಥ್, ಸೋಮನಹಳ್ಳಿ ಶಿವ, ಲಕ್ಕಿಕುಪ್ಪೆ ಮಂಜುನಾಥ್, ತಂದ್ರೆ ವೆಂಕಟೇಶ್, ಕಂಠಿಕುಮಾರ್, ಗೋವಿಂದರಾಜು ಸೇರಿದಂತೆ ಮತ್ತಿತರರು ಇದ್ದರು.

RELATED ARTICLES
- Advertisment -
Google search engine

Most Popular