Saturday, April 12, 2025
Google search engine

Homeಸ್ಥಳೀಯಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ವಾಸ್ತವ್ಯ

ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ವಾಸ್ತವ್ಯ

ಮೈಸೂರು: ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಾಡಂಚಿನ ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಶಾಸಕ ದರ್ಶನ್ ಧ್ರುವನಾರಾಯಣ್ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮವಾದ ದೇಪೇಗೌಡನಪುರ ಗ್ರಾಮಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಮಧ್ಯರಾತ್ರಿಯಲ್ಲಿ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು. ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳು ಹಾಗೂ ಹುಲಿ ಚಿರತೆ ಇನ್ನಿತರ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ರೈತರು ಬೆಳೆದ ಬೆಳೆಗಳನ್ನು ನಾಶ ಮಾಡುತ್ತಿವೆ. ರೈತರ ಜಮೀನುಗಳಿಗೆ ಕಾಡುಪ್ರಾಣಿಗಳ ಕಾಟ ಹೆಚ್ಚಾಗಿದೆ ಎಂದು ರೈತರು ತಡ ರಾತ್ರಿಯ ಸಮಯದಲ್ಲಿ ಶಾಸಕರಿಗೆ ದೂರವಾಣಿ ಮೂಲಕ ಕರೆ ಮಾಡಿ ತಮ್ಮ ನೋವನ್ನು ಹೇಳಿಕೊಳ್ಳುತ್ತಿದ್ದರು.

ಇದಕ್ಕೆ ಕೂಡಲೇ ಸ್ಪಂದಿಸಿದ ಶಾಸಕ ದರ್ಶನ್ ಧ್ರುವನಾರಾಯಣ್, ಖುದ್ದು ಸ್ಥಳಕ್ಕೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ, ಕಾಡುಪ್ರಾಣಿಗಳು ಬರುವ ೨೭ ಜಾಗಗಳಿಗೂ ತೆರಳಿ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ೧೯ ಕಿಲೋ ಮೀಟರ್ ತನಕ ರೈಲ್ವೆ ಕಂಬಿ ಅಳವಡಿಸಲಾಗುವುದು. ಹಾಗೂ ಹುಲಿ ಮತ್ತು ಚಿರತೆ ಸೆರೆ ಹಿಡಿಯಲು ಬೋನು ಅಳವಡಿಸಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಥಳದಲ್ಲಿಯೇ ರೈತರ ಸಮಸ್ಯೆಗಳನ್ನು ಆಲಿಸಿ, ಮುಂದಿನ ದಿನಗಳಲ್ಲಿ ಸದನದಲ್ಲಿ ಸಚಿವರ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದರು. ಇನ್ನು ಮಧ್ಯರಾತ್ರಿಯಲ್ಲಿ ಕಾಡಂಚಿನ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮ ವಾಸ್ತವ್ಯ ಮಾಡಿದ ಶಾಸಕರ ಕಾರ್ಯಕ್ಕೆ ಸಾರ್ವಜನಿಕರು ಹಾಗೂ ಕ್ಷೇತ್ರದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular