Friday, April 11, 2025
Google search engine

Homeರಾಜ್ಯಸಾಹಿತಿ ನಾ.ಡಿಸೋಜ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಗೋಪಾಲಕೃಷ್ಣ ಬೇಳೂರು

ಸಾಹಿತಿ ನಾ.ಡಿಸೋಜ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ನಿನ್ನೆ ಅನಾರೋಗ್ಯದಿಂದ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜ(೮೭) ಅವರ ಪಾರ್ಥೀವ ಶರೀರವನ್ನು ಸಾಗರಕ್ಕೆ ಮಂಗಳೂರಿನಿಂದ ತರಲಾಗಿತ್ತು. ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪಡೆದರು.

ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ ಸ್ವಗೃಹಕ್ಕೆ ನಿನ್ನೆ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ಪಾರ್ಥೀವ ಶರೀರವನ್ನು ತರಲಾಗಿತ್ತು. ಇಂದು ಅವರ ಸ್ವಗೃಹಕ್ಕೆ ತೆರಳಿದ್ದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಅಂತಿಮ ದರ್ಶನ ಪಡೆದರು.

ಇಂದು ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಸಾಗರದ ನಗರಸಭೆ ಆವರಣದಲ್ಲಿನ ಗಾಂಧಿ ಮೈದಾನದಲ್ಲೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಹಿರಿಯ ಸಾಹಿತಿ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನಾಳೆ ಹಿರಿಯ ಸಾಹಿತಿ ನಾ.ಡಿಸೋಜ ಅವರ ಪಾರ್ಥೀವ ಶರೀರವನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ಸಾಗರದಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular