Friday, April 4, 2025
Google search engine

Homeರಾಜ್ಯನಿನಗೆ ತಾಕತ್ ಇದ್ರೆ ನಿನ್ನ ಬಳಿ ನನ್ನದೇನಿದೆ ಬಹಿರಂಗಪಡಿಸು: ಯತ್ನಾಳ್ ವಿರುದ್ಧ ಶಾಸಕ ಜಿಟಿ ದೇವೇಗೌಡ...

ನಿನಗೆ ತಾಕತ್ ಇದ್ರೆ ನಿನ್ನ ಬಳಿ ನನ್ನದೇನಿದೆ ಬಹಿರಂಗಪಡಿಸು: ಯತ್ನಾಳ್ ವಿರುದ್ಧ ಶಾಸಕ ಜಿಟಿ ದೇವೇಗೌಡ ಕಿಡಿ

ಮೈಸೂರು: ನನ್ನ ಯೋಗ್ಯತೆ, ನನ್ನ ಆಸ್ತಿ ಲೆಕ್ಕ ನಿನಗೇನು ಗೊತ್ತು? ನಿನಗೆ ತಾಕತ್ ಇದ್ರೆ ನಿನ್ನ ಬಳಿ ನನ್ನದೇನಿದೆ ಬಹಿರಂಗಪಡಿಸು. ನಿನ್ನ ವಿಚಾರವೂ ನನಗೆ ಗೊತ್ತಿದೆ. ನಾನು ಬಹಿರಂಗಪಡಿಸುತ್ತೇನೆ. ನಾನು ಭ್ರಷ್ಟಾಚಾರ ಮಾಡಿರೋದನ್ನ ನೀನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಜೆಡಿಎಸ್ ಮುಖಂಡ ಜಿಟಿ ದೇವೇಗೌಡ ಸವಾಲು ಹಾಕಿದ್ದಾರೆ.

ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ ಪಾತ್ರವೂ ಇದೆ ಎಂಬ ಶಾಸಕ ಯತ್ನಾಳ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.

ನೀನು ಸೌಹಾರ್ದ ಬ್ಯಾಂಕಿನ ಹೆಸರಿನಲ್ಲಿ ಹಣ ಡೆಪಾಸಿಟ್ ಮಾಡಿಸಿಕೊಂಡು, ಅದನ್ನ ಎಲ್ಲೆಲ್ಲಿ ಹೂಡಿಕೆ ಮಾಡಿದ್ಯಾ ಎಂಬುದು ನನಗೆ ಗೊತ್ತಿಲ್ವಾ? ಎಲ್ಲವನ್ನೂ ತೆಗೀಬೇಕಾ? ನಾನು ಭ್ರಷ್ಟಾಚಾರ ಮಾಡಿರೋದನ್ನ ನೀನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಅವರು ಸವಾಲು ಹಾಕಿದರು.

ನಾನು ಶಾಸಕನಾಗಿ ಬಂದಾಗ ಇದ್ದ ಆಸ್ತಿಗೂ, ಇವತ್ತಿನ ಆಸ್ತಿಗು ಏನು ವ್ಯತ್ಯಾಸ ಇದೆ ಅನ್ನೋದನ್ನ ನೀನು ತೆಗಿ. ನೀನು ರಾಜಕೀಯಕ್ಕೆ ಬಂದಾಗ ಏನಿತ್ತು? ನಂತರ ನೀನು ಹೇಗೆ ದುಂಡಗಾದೆ? ಸೌಹಾರ್ಧ ಬ್ಯಾಂಕಿನ ಹೆಸರಿನಲ್ಲಿ ಹಣ ಡೆಪಾಸಿಟ್ ಮಾಡಿಸಿಕೊಂಡು, ಅದನ್ನ ಎಲ್ಲೆಲ್ಲಿ ಹೂಡಿಕೆ ಮಾಡಿದ್ಯಾ ಎಂಬುದು ನನಗೆ ಗೊತ್ತಿಲ್ವ? ಎಲ್ಲದನ್ನೂ ತೆಗೀಬೇಕಾ? ಎಂದರು.

ಬಸನಗೌಡ ಪಾಟೀಲ್ ಯತ್ನಾಳ್‌ಗೆ ಸದಾ ಇನ್ನೊಬ್ಬರ ಬಗ್ಗೆ ಮಾತಾಡುವುದು ಒಂದು ಚಟ. ದಿನವೂ ಅದೇ ಚಟದಲ್ಲಿ ಮಾತಾಡ್ತಾರೆ. ಬೇರೆಯವರಿಗೆ ಮಾತನಾಡಿದಂತೆ ನನ್ನ ಜೊತೆ ಮಾತನಾಡಬೇಡ ಎಂದು ಅವರು ಎಚ್ಚರಿಕೆ ನೀಡಿದರು.

RELATED ARTICLES
- Advertisment -
Google search engine

Most Popular