ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರಿನ ವಿಧಾನ ಪರಿಷತ್ತಿನ ಶಾಸಕ ಐವನ್ ಡಿಸೋಜಾ ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನ ಪರಿಷತ್ತಿನ ಕಲಾಪದಲ್ಲಿ ಕರಾವಳಿಯ ಜನಪ್ರಿಯ ಹಾಗೂ ಸಾಹಸ ಕ್ರೀಡೆ ಕಂಬಳವನ್ನು ಶಿಸ್ತು ಬದ್ಧವಾಗಿ ಸಂಘಟಿಸಲು ಪ್ರತಿ ಕಂಬಳಕ್ಕೆ ₹ 5 ಲಕ್ಷದಂತೆ ಸರ್ಕಾರದಿಂದ ಪ್ರೋತ್ಸಾಹ ಧನವನ್ನು ನೀಡುವ ಬಗ್ಗೆ ಮತ್ತು ರಾಜ್ಯ ಕಂಬಳ ಅಸೋಸಿಯೇಶನ್ ರಚನೆ ಮಾಡಿ ಕರ್ನಾಟಕ ಕ್ರೀಡಾ ಪ್ರಾಧಿಕಾರ ಮಾನ್ಯತೆ ನೀಡುವ ಬಗ್ಗೆ ಸದನದ ಶೂನ್ಯ ವೇಳೆಯಲ್ಲಿ ಮಾನ್ಯ ಸಭಾಪತಿ ರವರ ಮುಖಾಂತರ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆದರು.