ಮಂಡ್ಯ: ಮದ್ದೂರು ತಾಲೂಕಿನ ಸೋಮನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಕದಲೂರು ಉದಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದು ಎರಡನೇ ವರ್ಷದ ಗೌರಿ ಗಣೇಶ ಮೂರ್ತಿ ವಿತರಣೆ ಕಾರ್ಯಕ್ರಮಕ್ಕೆ ಶಾಸಕ ಕದಲೂರು ಉದಯ್ ಚಾಲನೆ ನೀಡಿದರು.
ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳು ಮುಂದಿನ ದಿನಗಳಲ್ಲಿ ಆಗಲಿ ರೈತರು ಸಂಕಷ್ಟವನ್ನು ಮಳೆರಾಯ ದೂರ ಮಾಡಲಿ ಎಲ್ಲರೂ ಸುಖ ಶಾಂತಿ ನೆಮ್ಮದಿಯಿಂದ ಜೀವನ ಸಾಗಿಸಲಿ ಎಂದು ಗಣೇಶನಿಗೆ ಪೂಜೆ ಸಲ್ಲಿಸಿ ಗ್ರಾಮಕ್ಕೆ ಎಲ್ಲರಂತೆ ಗಣೇಶ ಮೂರ್ತಿಗಳನ್ನು ವಿತರಣೆ ಮಾಡುವುದಾಗಿ ಶಾಸಕ ಕದಲೂರು ಉದಯ್ ತಿಳಿಸಿದರು. ಈ ವೇಳೆ ವಿನುತಾ ಉದಯ್, ಟ್ರಸ್ಟ್ ಸದಸ್ಯರಾದ ರವಿಕುಮಾರ್, ಹರೀಶ್, ಬಾಬು ಸೇರಿದಂತೆ ಇತರರು ಹಾಜರಿದ್ದರು.