ಮದ್ದೂರು : ಮೈಸೂರಿನ ಮುಡಾ ಹಗರಣದ ಆರೋಪ ಹಾಗೂ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ವಿನಾಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಮುಡಾ ಹಗರಣದಲ್ಲಿ ಸಿಲುಕಿಸುವ ಹುನ್ನಾರ ವಿಪಕ್ಷಗಳಿಂದ ನಡೆದಿದ್ದು, ಅದಕ್ಕಾಗಿ ಮುಖ್ಯಮಂತ್ರಿಗಳ ರಾಜೀನಾಮೆ ಕೇಳುವುದು ಸರಿಯಲ್ಲ ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.
ತಾಲ್ಲೂಕಿನ ಮುದಗೆರೆ ಹಾಗೂ ಚಾಮನಹಳ್ಳಿ ಗ್ರಾಮಗಳಲ್ಲಿ ಗುರುವಾರ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಿದ ಬಳಿಕ ಸುದ್ಧಿಗಾರರು ವಿಧಾನ ಮಂಡಲ ಅಧಿವೇಶನದಲ್ಲಿ ವಿಪಕ್ಷಗಳ ಸದಸ್ಯರು ಮುಖ್ಯಮಂತ್ರಿ ಗಳ ರಾಜೀನಾಮೆಗೆ ಆಗ್ರಹಿಸಿ ಪಟ್ಟು ಹಿಡಿದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.
ಈ ಹಿಂದೆ ಸಿದ್ದರಾಮಯ್ಯರವರ ಕುಟುಂಬಕ್ಕೆ ಸಂಬಂಧಿಸಿದಂತ ಭೂಮಿಯು ಮುಡಾ ವ್ಯಾಪ್ತಿಗೆ ಒಳಪಟ್ಟ ಹಿನ್ನೆಲೆಯಲ್ಲಿ ಅದರಿಂದ ಅವರ ಪತ್ನಿಗೆ ನೀಡಿರುವುದು ಎಂದು ಈ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ಉತ್ತರಿಸಿದ್ದು ಗೊಂದಲವನ್ನು ಉಂಟು ಮಾಡಿರುವುದು ಮೈತ್ರಿ ಪಕ್ಷಗಳ ನಾಯಕರುಗಳು, ಇದು ರಾಜಕೀಯ ಪ್ರೇರಿತ ಎಂದರು.
ಈ ವೇಳೆ ಕಿಸಾನ್ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್, ಮುಖಂಡರಾದ ಗೋಪಿ, ಗ್ರಾ. ಪಂ ಉಪಾಧ್ಯಕ್ಷ ಗೂಳೇಶ್, ಸ್ವಾಮಿ, ಶಂಕರ್ ದೇಶ ಹಳ್ಳಿ ಸೇರಿದಂತೆ ಹಲವರು ಹಾಜರಿದ್ದರು.