ಮದ್ದೂರು: ತಿಮ್ಮದಾಸ್ ಟ್ರಾವೆಲ್ಸ್ ಮಾಲೀಕರಾದ ಸಿಟಿ ಶಂಕರ್ ರವರು ಸರ್ಕಾರಿ ಶಾಲಾ ಮಕ್ಕಳ ಅನುಕೂಲಕ್ಕಾಗಿ ವಾಹನವನ್ನು ದಾನ ನೀಡಿರುವುದು ಖುಷಿಯ ವಿಚಾರ ಎಂದು ಶಾಸಕ ಕೆ ಎಂ ಉದಯ್ ಮೆಚ್ಚುಗೆ ವ್ಯಕ್ತಪಡಿಸಿದರು.
ತಾಲೂಕಿನ ಆತಗೂರು ಹೋಬಳಿಯ ಮಲ್ಲನಕುಪ್ಪೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಿಟಿ ಶಂಕರ್ ದಾನವಾಗಿ ನೀಡಿರುವ ವಾಹನವನ್ನು ಶಾಲೆಯ ಆಡಳಿತ ಮಂಡಳಿಗೆ ಹಸ್ತಂತರಿಸಿ ಶಾಸಕ ಉದಯ್ ಮಾತನಾಡಿದರು.
ಮಲ್ಲನಕುಪ್ಪೆ ಗ್ರಾಮ ಪಂಚಾಯಿತಿ ದೊಡ್ಡ ಗ್ರಾಮ ಪಂಚಾಯಿತಿಯಾಗಿದ್ದು ಇಲ್ಲಿಯ ಸರ್ಕಾರಿ ಶಾಲೆಗೆ ಮಲ್ಲನಕುಪ್ಪೆ ಹನುಮಂತಪುರ ಅಡುಗನಹಳ್ಳಿ ಹಾಗೂ ಚನ್ನಪಟ್ಟಣ ತಾಲೂಕಿನ ತಿಮ್ಮಸಂದ್ರ ಕದಿರು ಮಂಗಳ ಸೇರಿದಂತೆ ಹಲವು ಗ್ರಾಮಗಳಿಂದ ಈ ಸಲ ವಿದ್ಯಾರ್ಥಿಗಳು ಬರುತ್ತಿದ್ದು ಇಲ್ಲಿಯ ವಿದ್ಯಾರ್ಥಿಗಳಿಗೆ ಶಾಲೆಗೆ ಬರಲು ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಸಿಟಿ ಶಂಕರ್ ರವರು ಸ್ವತಃ ನೀಡಿರುವುದು ಪ್ರಶಂಸನೀಯು ಸಂಗತಿ ಎಂದು ತಿಳಿಸಿದರು.

ಎಲ್ಕೆಜಿ ಹಾಗೂ ಯುಕೆಜಿ ಎಲ್ಲಿ 50 ವಿದ್ಯಾರ್ಥಿಗಳು ಒಂದರಿಂದ ಏಳನೇ ತರಗತಿಯವರೆಗೆ 210ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ಹಾಜರಾತಿ ಕಂಡುಬರುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.
ಶಾಲೆಯ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಅಂತಹಂತವಾಗಿ ಕ್ರಮ ಕೈಗೊಳ್ಳುತ್ತಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಮೂಲ ಸೌಕರ್ಯವನ್ನು ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಾಗುವುದು ವಿದ್ಯಾರ್ಥಿಗಳು ಕಠಿಣ ವ್ಯಾಸಂಗ ಮಾಡುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿ ನೊಂದವರ ಬಾಳಿಗೆ ಬೆಳಕಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಸರ್ಕಾರಿ ಶಾಲೆಗೆ ಸಾಲ ವಾಹನವನ್ನು ದಾನ ನೀಡಿದ ಧಿಮದ ಟ್ರಾವೆಲ್ಸ್ ಮಾಲೀಕ ಹಾಗೂ ಸಮಾಜಸೇವಕ ಸಿಟಿ ಶಂಕರ್ ಮಾತನಾಡಿ ,ಮಕ್ಕಳಿಗೆ ವಿದ್ಯಾಭ್ಯಾಸ ಹಾಗೂ ಆರೋಗ್ಯ ಅತಿ ಮುಖ್ಯವಾಗಿದ್ದು ಇವೆರಡು ಇದ್ದರೆ ಎಲ್ಲಿ ಬೇಕಾದರೂ ಹೋಗಿ ಒಳ್ಳೆಯ ರೀತಿಯಲ್ಲಿ ಬದುಕು ಕಟ್ಟಿಕೊಳ್ಳಬಹುದು ಎಂದರು.
ಶಾಲೆಯ ವಿದ್ಯಾರ್ಥಿಗಳು ವಿವಿಧ ಗ್ರಾಮಗಳಿಂದ ಶಾಲೆಗೆ ಬರಲು ತೊಂದರೆಯಾಗುತ್ತಿದೆ ಎಂದು ಎಸ್ ಡಿಎಂಸಿ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ನನ್ನ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸ್ವಂತ ಹಣದಲ್ಲಿ ವಾಹನ ಖರೀದಿಸಿ ನೀಡಲಾಗಿದೆ.
ಮುಂದೆಯೂ ಈ ಶಾಲೆಗೆ ನನ್ನ ಕೈಯಲಾದ ಸಹಾಯ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಲವಾರು ವ್ಯಕ್ತಿಗಳು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.
ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗದೆ ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಬಂದಾಗ ಬೇಕು ಎಂದು ಮನವಿ ಮಾಡಿದರು.
ಈ ವೇಳೆ ಬಿ ಇ ಓ ಸಿ ಎಚ್ ಕಾಡಿರಯ್ಯ, ಸರ್ಕಾರಿ ಸಾಲ ಶಿಕ್ಷಕ ಸಂಘದ ಅಧ್ಯಕ್ಷ ದೇವರಾಜು, ಎಸ್ ಡಿ ಎಮ್ ಸಿ ಅಧ್ಯಕ್ಷ ಕುಮಾರ್, ಉಪಾಧ್ಯಕ್ಷ ಸಿದ್ದರಾಜು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರವಿ, ಮುಖ್ಯ ಶಿಕ್ಷಕರ ನಾಗರಾಜು, ಅಕ್ಷರ ದಾಸೋಹ ಅಧಿಕಾರಿ ಮಂಗಳಮ್ಮ, ಮುಖಂಡರಾದ ಲೋಕೇಶ್, ರಾಜೇಶ್, ಮಧು ರಾಮಲಿಂಗಯ್ಯ ಸೇರಿದಂತೆ ಇತರರು ಹಾಜರಿದ್ದರು.