ಮಂಗಳೂರು (ದಕ್ಷಿಣ ಕನ್ನಡ); ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಮಂಜುನಾಥ ಭಂಡಾರಿಯವರು ಮಂಗಳೂರು ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಇನಾಯತ್ ಅಲಿ, ಗುರುಪುರ ಬ್ಲಾಕ್ ಅಧ್ಯಕ್ಷ ಸುರೇಂದ್ರ ಕಂಬಳಿ, ದಕ್ಷಿಣ ಕನ್ನಡ ಜಿಲ್ಲಾ RGPRS ಘಟಕದ ಅಧ್ಯಕ್ಷ ಸುಭಾಶ್ಚಂದ್ರ ಕೊಳ್ನಡು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜಾ, ಬೆಂಗ್ರೆ ವಲಯ ಅಧ್ಯಕ್ಷ ಅಶ್ರಫ್ ಹಾಗೂ ಸ್ಥಳಿಯ ಕಾಂಗ್ರೆಸ್ ಪಕ್ಷದ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.