ಮಂಡ್ಯ: ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅಧ್ಯಕ್ಷತೆಯಲ್ಲಿ ಮಂಡ್ಯದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಲಾಯಿತು.
ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ನೀರಾವರಿ ಸಮಸ್ಯೆ, ಬೆಳೆ ಪರಿಹಾರದ ಬಗ್ಗೆ ಚರ್ಚೆ ಮಾಡಲಾಯಿತು.
ರೈತರ ಜಮೀನಿನಲ್ಲಿ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಈ ವೇಳೆ ಮಾತನಾಡಿದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಜನ ಸಂಪರ್ಕ ಸಭೆಯಲ್ಲಿ ಜನರ ಸಮಸ್ಯೆಯನ್ನ ಸ್ಥಳದಲ್ಲೇ ಪರಿಶೀಲಿಸುತ್ತೇವೆ. ನಮ್ಮ ಸರ್ಕಾರದ ಸೂಚನೆಯಂತೆ ನಾವು ಸ್ಥಳಕ್ಕೆ ತೆರಳಿ ಜನರ ಸಮಸ್ಯೆ ನಿವಾರಣೆ ಮಾಡ್ತೇವೆ ಎಂದು ಹೇಳಿದರು.