ಬೆಂಗಳೂರು : ರಾಜ್ಯದಲ್ಲಿ ಉಪಚುನಾವಣೆ ಮುಗಿದ ನಂತರ ಸಚಿವ ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬಂದಿದ್ದು ಹೈಕಮಾಂಡ್ ಗೆ ಶಾಸಕರು ಒತ್ತಡ ಹಾಕುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್, ಮೇ 2ನೇ ಅಥವಾ 3ನೇ ವಾರದಲ್ಲಿ ಸಿಹಿಸುದ್ದಿ ಕೊಡುತ್ತೇವೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ ಎಂದಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ ಅಶೋಕ್ ಪಟ್ಟಣ್, ದೆಹಲಿಗೆ ಹೋಗಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿದ್ದೇವೆ ಮೇ 2ನೇ ವಾರ ಅಥವಾ 3ನೇ ವಾರದಲ್ಲಿ ಸಿಹಿಸುದ್ದಿ ಕೊಡುತ್ತೇವೆ ಎಂದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಮ್ಮ ಜೊತೆ ಮಾತನಾಡಿದ್ದಾರೆ. ಎಂದರು.
ಮತ್ತೊಮ್ಮೆ ಸಭೆ ಸೇರಲು ಶಾಸಕರು ಒತ್ತಾಯಿಸುತ್ತಿದ್ದಾರೆ. ಉಪಚುನಾವಣೆ ರಿಸಲ್ಟ್ ಬಂದ ತಕ್ಷಣ 40 ಶಾಸಕರು ದೆಹಲಿಗೆ ಹೋಗುತ್ತೇವೆ ಎಂದರು.



