ಮೈಸೂರು: ನಗರದ ಪ್ರತಿಷ್ಠಿತ ಎಂ.ಎಂ.ಕೆ. ಮತ್ತು ಎಸ್.ಡಿ.ಎಂ. ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ೨೦೨೩ರಂದು ೨೦೨೩-೨೪ನೇ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳ ಪೋಷಕರಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ನಯನಕುಮಾರಿ ಮಾತನಾಡಿ, ಪೋಷಕರು ತಮ್ಮ ಮಕ್ಕಳು ಸನ್ಮಾರ್ಗದಲ್ಲಿ ನಡೆಯುವಂತೆ ನೋಡಿಕೊಳ್ಳಬೇಕಾಗಿ ವಿನಂತಿಸಿದರು. ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಸಂಸ್ಥೆಯ ಗುರಿ. ಅದಕ್ಕಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ನಾವು ಮಾಡುವುದಾಗಿ ತಿಳಿಸಿದರು. ಇದಕ್ಕೆ ಪೋಷಕರ ಸಹಕಾರವೂ ಬಹಳ ಮುಖ್ಯ ಎಂದರು.
ಗೌರವ ಅತಿಥಿಗಳಾಗಿ ಆಹ್ವಾನಿತರಾಗಿದ್ದ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸಾಯಿನಾಥ್ ಮಲ್ಲಿಗೆ ಮಾಡು ಅವರು ಮಾತನಾಡಿ ಉತ್ತಮ ಕಾಲೇಜನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ಅಭಿನಂದಿಸಿರು.
ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಶೋಭ ಎಸ್. ಪಿ. ಅವರು ಕಾಲೇಜಿನ ಬಗ್ಗೆ ಮಾಹಿತಿಯನ್ನು ನೀಡಿದರು.
ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಹಾಗೂ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಆಶಾ ಎನ್. ಎಸ್. ಮತ್ತು ಹಿರಿಯ ಉಪನ್ಯಾಸಕರು ಮತ್ತು ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವಿಜಯಶ್ರೀ ಜೆ. ಎಸ್. ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆಂಗ್ಲಭಾಷಾ ಉಪನ್ಯಾಸಕಿ ಕು. ಯಶಸ್ವಿನಿ ಎಂ. ಪಿಪಿಟಿ ಪ್ರಸ್ತುತ ಪಡಿಸಿದರು. ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ವೇತಾ ಬಿ ಎಸ್ ಸ್ವಾಗತಿಸಿದರು.ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪುಷ್ಪ ಬಿ ವಂದನೆಗಳನ್ನು ಸಲ್ಲಿಸಿದರು. ಕನ್ನಡಭಾಷಾ ವಿಭಾಗದ ಮುಖ್ಯಸ್ಥರಾದ ಪ್ರತಿಮಾ ಟಿ ನಿರೂಪಿಸಿದರು.