ಬೆಂಗಳೂರು: ಹೆಲ್ಮೆಟ್ ಹಾಕಿಕೊಂಡು ದ್ವಿಚಕ್ರ ವಾಹನದಲ್ಲಿ ಸುತ್ತಾಡುತ್ತಾ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜೆಸಿ ನಗರ ಠಾಣೆ ಪೋಲಿಸರು ಬಂಧಿಸಿ ೩.೫ ಲಕ್ಷ ರೂ. ಬೆಲೆಬಾಳುವ ವಿವಿಧ ಕಂಪನಿಯ ೧೪ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ಆಸಿಫ್ (೨೮) ಮತ್ತು ಇಮ್ರಾನ್ (೨೯) ಬಂಧಿತ ಆರೋಪಿಗಳು.
ಈ ಆರೋಪಿಗಳು ವಿಲಿಯಮ್ಸ್ ಟೌನ್, ೨ನೇ ಮುಖ್ಯರಸ್ತೆಯಲ್ಲಿರುವ ಪಾರ್ಕ್ ಹತ್ತಿರ ಆ.೨ರಂದು ಮಧ್ಯಾಹ್ನ ೨.೪೦ರ ಸುಮಾರಿನಲ್ಲಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಡ್ರ್ಯಾಗರ್ ತೋರಿಸಿ ಹೆದರಿಸಿ ಮೊಬೈಲ್ ಸುಲಿಗೆ ಮಾಡಿದ್ದ ಬಗ್ಗೆ ಜೆಸಿ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೃತ್ಯ ನಡೆದ ಸ್ಥಳದಲ್ಲಿನ ಸಿಸಿ ಟಿವಿ ಪರಿಶೀಲಿಸಿ ಅದರಲ್ಲಿ ಸೆರೆಯಾಗಿದ್ದ ದೃಶ್ಯಾವಳಿ ಆಧರಿಸಿ ಸುಲಿಗೆಕೋರರ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿತ್ತು.