Friday, April 11, 2025
Google search engine

Homeರಾಜ್ಯಸುದ್ದಿಜಾಲಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಬಳಕೆ ನಿಷೇಧ

ಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಬಳಕೆ ನಿಷೇಧ

ಮೈಸೂರು: ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣವಾಗಿರುವಂತ, ನಾಡಿನ ಅಧಿ ದೇವತೆಯ ಸನ್ನಿಧಿಯಾಗಿರುವಂತ ಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಬಳಕೆಗೆ ನಿಷೇಧವನ್ನು ಹೇರಲಾಗಿದೆ.

ಇಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಮುಂಡಿ ಬೆಟ್ಟದ ಅಭಿವೃದ್ಧಿಗಾಗಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಭಕ್ತಾಧಿಗಳಿಗೆ ಸೌಲಭ್ಯವನ್ನು ಒದಗಿಸುವ ದೃಷ್ಠಿಯಿಂದ ಪ್ರಾಧಿಕಾರವನ್ನು ರಚಿಸಲಾಗಿದೆ ಎಂದರು.

ದಸರಾ ಸಂದರ್ಭದಲ್ಲಿ ವಿವಿಧ ಭಾಗಗಳಿಂದ ಜನರು ಆಗಮಿಸುತ್ತಾರೆ. ಭಕ್ತರಿಗೆ ಸೌಲಭ್ಯ ಒದಗಿಸಿಕೊಡಬೇಕಿದೆ. ಸ್ವಚ್ಥತೆ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದಂತ ಅವರು, ಸುರಕ್ಷತೆಯ ದೃಷ್ಠಿಯಿಂದ ಸಿಸಿಟಿವಿ ಅಳವಡಿಕೆಗೂ ಸೂಚಿಸಿದರು.

ಅಪರಾಧಗಳನ್ನು ತಡೆಗಟ್ಟುವ ಸಲುವಾಗಿ ಟಾಸ್ಕ್ ಪೋರ್ಸ್ ರಚನೆ ಮಾಡಲಾಗುತ್ತದೆ. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡುವ ಸಲುವಾಗಿ ಧೂಮಪಾನ, ಮಧ್ಯಪಾನ, ಗುಟ್ಕಾ ನಿಷೇಧವಿದೆ. ಇದಲ್ಲದೇ ಚಾಮುಂಡಿ ತಾಯಿಯ ದರ್ಶನದ ವೇಳೆಯಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ ಎಂಬುದಾಗಿ ತಿಳಿಸಿದರು.

RELATED ARTICLES
- Advertisment -
Google search engine

Most Popular