Friday, April 18, 2025
Google search engine

Homeಸ್ಥಳೀಯಇಂದು ರಾಜ್ಯದ ಕರಾವಳಿ ಸೇರಿ ಹಲವೆಡೆ ಸಾಧಾರಣ ಮಳೆ

ಇಂದು ರಾಜ್ಯದ ಕರಾವಳಿ ಸೇರಿ ಹಲವೆಡೆ ಸಾಧಾರಣ ಮಳೆ

ಕರ್ನಾಟಕ: ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿ ತಿಂಗಳಾಗುತ್ತಾ ಬಂದಿದೆ. ಆದರೆ ದಕ್ಷಿಣ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮಾತ್ರ ಮಾತ್ರ ಮಳೆರಾಯ ಅಬ್ಬರಿಸುತ್ತಿದ್ದು, ಇನ್ನೂ ಕೆಲವಡೆ ಮಳೆಯೇ ಇಲ್ಲದಂತಾಗಿ ಅನ್ನದಾತ ಕಂಗಾಲಾಗಿದ್ದಾನೆ. ಅದರಲ್ಲೂ ಮುಂಗಾರು ನಂಬಿ ಬಿತ್ತನೆ ಮಾಡಿದವರ ಪಾಡಂತೂ ಹೇಳತೀರದಾಗಿದೆ. ಹಾಗೆಯೇ ಹವಾಮಾನ ಇಲಾಖೆ ಮಾತ್ರ ಮಳೆಯ ಮುನ್ಸೂಚನೆಯನ್ನು ಕೊಡುತ್ತಲೇ ಇದ್ದು, ಈ ಪ್ರಕಾರ ಇಂದು ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆಯಿಂದಲೂ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣವೇ ಮುಂದುವರೆದಿತ್ತು. ಮಧ್ಯಾಹ್ನ 4 ಗಂಟೆಯಿಂದಲೂ ಮೋಡ ಕವಿದ ವಾತಾವರಣ ಇದ್ದು, ರಾತ್ರಿ 9 ಗಂಟೆ ವೇಳೆಗೆ ನಗರದ ಹಲವೆಡೆ ಜಿನುಗು ಮಳೆಯಾಗಿದೆ. ಹಾಗೆಯೇ ಇಂದು (ಬುಧವಾರ) ಕೂಡ ಬೆಳಗ್ಗೆಯಿಂದ ಮೋಡ ಕವಿದ ವಾತಾರಣ ಮುಂದುವರೆದಿದ್ದು, ಇಲ್ಲಿ ಸಂಜೆ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮುಂಗಾರು ಆರ್ಭಟ ಹೆಚ್ಚಾಗಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬುಧವಾರ ಗುಡುಗು ಸಹಿತ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಅಲ್ಲದೆ ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ ಬರಬೇಕಾಗಿತ್ತು. ಆದರೆ ಈ ಬಾರಿ ಎರಡು ವಾರ ವಿಳಂಬ ಆದ್ದರಿಂದ ಹಲವು ಜಿಲ್ಲೆಗಳಲ್ಲಿ ಬಿತ್ತನೆ ಕಾರ್ಯ ಇನ್ನೂ ಆರಂಭವಾಗಿಲ್ಲ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್‌ 27 & 28ರಂದು ಭಾರೀ ಮಳೆ ಮುನ್ಸೂಚನೆ

ಚಿತ್ರದುರ್ಗ, ದಾವಣಗೆರೆ, ಕಲಬುರಗಿ ಸೇರಿ ಹಲವೆಡೆ ಮುಂಗಾರು ತಡವಾಗಿ ಪ್ರವೇಶ ಮಾಡಿದ್ದು, ಮಳೆಗಾಗಿ ಮೋಡದ ಕಡೆ ಮುಖ ಮಾಡಿ ಕುಳಿತಿದ್ದ ರೈತರ ಮುಖದಲ್ಲಿ ಸ್ವಲ್ಪ ಮಟ್ಟಿಗೆ ಮಂದಹಾಸ ಮೂಡಿದಂತಾಗಿತ್ತು. ಇದರ ನಡುವೆಯೇ ಮತ್ತೆ ಇದೀಗ ಮುಂಗಾರು ಕೈಕೊಟ್ಟಿದ್ದು, ಇದು ರೈತರನ್ನು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ಮಂಗಳವಾರ ಬೆಳಗ್ಗೆ ಕರಾವಳಿಯ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಹಲವೆಡೆ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ ಬಿದ್ದಿದೆ.

ಹಾಗೆಯೇ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಸಾಧಾರಣ ಮಳೆ ಬಿದ್ದಿದೆ ಎಂದು ತಿಳಿದುಬಂದಿದೆ. ಮಂಗಳೂರು, ಉಡುಪಿ ಜಿಲ್ಲೆಯ ಕೋಟಾ, ಕುಂದಾಪುರ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕ್ಯಾಸಲ್ ರಾಕ್, ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ತಲಾ 3 ಸೆಂ.ಮೀ., ಉಡುಪಿ ಜಿಲ್ಲೆಯ ಕಾರ್ಕಳ, ಕಾರವಾರದಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ. ಪುತ್ತೂರು, ಸುಬ್ರಹ್ಮಣ್ಯ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಗೋಕರ್ಣ, ಬೆಳಗಾವಿ ಜಿಲ್ಲೆಯ ಲೋಂಡಾ, ಧಾರವಾಡ ಜಿಲ್ಲೆಯ ಕಲಘಟಗಿ, ಬೀದರ್ ಜಿಲ್ಲೆಯ ಭಾಲ್ಕಿ, ನಿಟ್ಟೂರು, ಚಿಕ್ಕಮಗಳೂರು ಜಿಲ್ಲೆಯ ಕಳಸ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ತಲಾ 1 ಸೆಂ.ಮೀ. ಮಳೆ ಬಿದ್ದಿದೆ ಎಂದು ತಿಳಿಸಿದೆ.

ಇಂದು ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ವೇಗ ಗಂಟೆಗೆ 40-45 ಕಿ.ಮೀಟರ್‌ನಿಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಗುರುವಾರವೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ನಗರದಲ್ಲಿ ಬೆಳಗ್ಗೆಯಿಂದ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳಗೆ ನಗರದ ಹಲವೆಡೆ ಬಿರುಗಾಳಿ ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ಉಷ್ಣಾಂಶ 29 ಇದ್ದರೆ, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎನ್ನುವ ಮಾಹಿತಿಯನ್ನು ನೀಡಿದೆ.

RELATED ARTICLES
- Advertisment -
Google search engine

Most Popular