ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 3.0 ಸರ್ಕಾರದ ಬಜೆಟ್ ಅನ್ನು ಇದೇ ಜು.23 ರಂದು ಮಂಡಿಸಲಾಗುವುದು. ಮೋದಿ ಸಂಪುಟದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮೋದಿ 3.0 ಬಜೆಟ್ ಮಂಡಿಸಲಿದ್ದಾರೆ. ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ ಮಂಡಿಸಲಾಗುತ್ತಿರುವ ಮೊದಲ ಬಜೆಟ್ ಇದಾಗಿದ್ದು ಹಲವು ನಿರೀಕ್ಷೆಗಳನ್ನು ಒಳಗೊಂಡಿದೆ.