Wednesday, June 10, 2026
Google search engine

HomeUncategorizedರಾಷ್ಟ್ರೀಯನೆಹರೂ ದಾಖಲೆ ಮುರಿದ ಮೋದಿ: ಕೇಂದ್ರ ಸಚಿವ ಸಂಪುಟದಿಂದ ಅಭಿನಂದನಾ ನಿರ್ಣಯ

ನೆಹರೂ ದಾಖಲೆ ಮುರಿದ ಮೋದಿ: ಕೇಂದ್ರ ಸಚಿವ ಸಂಪುಟದಿಂದ ಅಭಿನಂದನಾ ನಿರ್ಣಯ

ನವದೆಹಲಿ: ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ದೀರ್ಘಕಾಲ ನಿರಂತರವಾಗಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ನಾಯಕ ಎಂಬ ಹೊಸ ದಾಖಲೆಯನ್ನು ಪ್ರಧಾನಿ ನರೇಂದ್ರ ಮೋದಿ ನಿರ್ಮಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟವು ಅಭಿನಂದನಾ ನಿರ್ಣಯವನ್ನು ಅಂಗೀಕರಿಸಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಎದ್ದುನಿಂತು ಚಪ್ಪಾಳೆ ತಟ್ಟುವ ಮೂಲಕ ಮೋದಿಗೆ ಅಭಿನಂದನೆ ಸಲ್ಲಿಸಿದರು.

2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ನರೇಂದ್ರ ಮೋದಿ ಅವರು ಜೂನ್ 10ರಂದು 4,399 ದಿನಗಳ ನಿರಂತರ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದರು. ಇದರೊಂದಿಗೆ ಅವರು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ದಾಖಲೆಯನ್ನು ಹಿಂದಿಕ್ಕಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ನೆಹರೂ ಅವರು 1952ರ ಮೇ 13ರಿಂದ 1964ರ ಮೇ 27ರವರೆಗೆ ನಿರಂತರವಾಗಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಅವರ ಈ ದಾಖಲೆ ಕಳೆದ 64 ವರ್ಷಗಳಿಂದ ಅಜೇಯವಾಗಿಯೇ ಉಳಿದಿತ್ತು. ಇದೀಗ ಮೋದಿ ಅವರು ಆ ದಾಖಲೆಯನ್ನು ಮುರಿದು ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ.

ಇದಕ್ಕೂ ಮುನ್ನ ಮೋದಿ ಅವರು 2025ರ ಜುಲೈ 25ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 4,077 ದಿನಗಳ ನಿರಂತರ ಅಧಿಕಾರದ ದಾಖಲೆಯನ್ನು ಹಿಂದಿಕ್ಕಿದ್ದರು. ಸತತ ಮೂರನೇ ಅವಧಿಯಲ್ಲೂ ದೇಶದ ಆಡಳಿತ ನಡೆಸುತ್ತಿರುವ ಮೋದಿ ಅವರ ಈ ಸಾಧನೆಯನ್ನು ಸಚಿವ ಸಂಪುಟ ಸಭೆಯಲ್ಲಿ ವಿಶೇಷವಾಗಿ ಪ್ರಶಂಸಿಸಲಾಯಿತು.

RELATED ARTICLES
- Advertisment -
Google search engine

Most Popular