ಮಂಡ್ಯ: ಪ್ರಧಾನಿಯಾಗಿ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪಂಜು ಹಿಡಿದು ಸಂಭ್ರಮಾಚರಣೆ ಮಾಡಿದ್ದಾರೆ.
ಪಟ್ಟಣದ ಮೈ- ಬೆಂ ಹೆದ್ದಾರಿಯ ಕುವೆಂಪು ವೃತ್ತದಲ್ಲಿ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಪಿ.ರಮೇಶ್ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಗಿದ್ದು, ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಮೋದಿ ಹಾಗೂ ಮಾಜಿ ಸಿ.ಎಂ ಕುಮಾರಸ್ವಾಮಿಗೆ ಜೈಕಾರ ಕೂಗಿ ಸಂಭ್ರಮಿಸಿದ್ದಾರೆ.
ಪ್ರಧಾನಿ ಮೋದಿ ಸೇರಿದಂತೆ ಸಚಿವ ಸಂಪುಟದ ಎಲ್ಲರಿಗೂ ಶುಭ ಹಾರೈಸಿ ಅಭಿನಂಧನೆ ಸಲ್ಲಿಸಿದ್ದಾರೆ.