Monday, April 21, 2025
Google search engine

Homeರಾಜ್ಯಮೋದಿಯವರು ಸ್ವಂತಕ್ಕಾಗಿ ಸ್ವಲ್ಪ, ದೇಶಕ್ಕಾಗಿ ಸರ್ವಸ್ವ ಚಿಂತನೆ ನಡೆಸಿದವರು: ಸಚಿವೆ ಶೋಭಾ ಕರಂದ್ಲಾಜೆ

ಮೋದಿಯವರು ಸ್ವಂತಕ್ಕಾಗಿ ಸ್ವಲ್ಪ, ದೇಶಕ್ಕಾಗಿ ಸರ್ವಸ್ವ ಚಿಂತನೆ ನಡೆಸಿದವರು: ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು: ನರೇಂದ್ರ ಮೋದಿಯವರು ಸ್ವಂತಕ್ಕಾಗಿ ಸ್ವಲ್ಪ, ದೇಶಕ್ಕಾಗಿ ಸರ್ವಸ್ವ ಎಂಬ ಮಾದರಿ ಜೀವನ ನಡೆಸಿದವರು. ನಮ್ಮೆಲ್ಲ ಕಾರ್ಯಕರ್ತರು ಮತ್ತು ಯುವಪೀಳಿಗೆಗೆ ಇದೇ ಸಂದೇಶವನ್ನು ಅವರು ನೀಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದರು.

ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ಜೀ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಕಲೆ ಮತ್ತು ಸಾಂಸ್ಕ್ರತಿಕ ಪ್ರಕೋಷ್ಠ ವತಿಯಿಂದ ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಏರ್ಪಡಿಸಿದ ಚಿತ್ರಕಲಾ ಶಿಬಿರ ಮತ್ತು ಪ್ರದರ್ಶನದಲ್ಲಿ ಅವರು ಮಾತನಾಡಿ, ಮೋದಿಜೀ ಅವರ ಜನ್ಮದಿನವನ್ನು ಮತ್ತು ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದರು.

ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ವಿವಿಧ ಸೇವಾ ಚಟುವಟಿಕೆಯಲ್ಲಿ ನಮ್ಮ ಕಾರ್ಯಕರ್ತರು ತೊಡಗಿಸಿಕೊಳ್ಳುತ್ತಿದ್ದಾರೆ. ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸ್ವಚ್ಛತಾ ಅಭಿಯಾನ, ಚಿತ್ರಕಲಾ ಪ್ರದರ್ಶಿನಿಗಳನ್ನು ಏರ್ಪಡಿಸಲಾಗುತ್ತಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರರು ಮತ್ತು ದೇಶಕ್ಕಾಗಿ ದುಡಿವ ಮಹನೀಯರನ್ನು ಸ್ಮರಿಸುವ ಕೆಲಸ ನಡೆಸಲಾಗುತ್ತಿದೆ. ಮುಖ್ಯಮಂತ್ರಿ ಮತ್ತು ದೇಶದ ಪ್ರಧಾನಿಯಾಗಿ ಸುಮಾರು ೨೫ ವರ್ಷಗಳಿಂದ ಮೋದಿಯವರು ಕೆಲಸ ಮಾಡಿದ್ದಾರೆ. ಎಲ್ಲವನ್ನೂ ಅವರು ಬಡವರ ಸಲುವಾಗಿ ಮಾಡಿದ್ದಾರೆ ಎಂದು ವಿಶ್ಲೇಷಿಸಿದರು.

RELATED ARTICLES
- Advertisment -
Google search engine

Most Popular