Friday, April 4, 2025
Google search engine

HomeUncategorizedರಾಷ್ಟ್ರೀಯಮೋದಿ ಜನ್ಮದಿನಕ್ಕೆ ಗಣ್ಯರು, ಅಭಿಮಾನಿಗಳಿಂದ ಶುಭಾಶಯ

ಮೋದಿ ಜನ್ಮದಿನಕ್ಕೆ ಗಣ್ಯರು, ಅಭಿಮಾನಿಗಳಿಂದ ಶುಭಾಶಯ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು 74ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ದೇಶ ಮತ್ತು ವಿದೇಶಗಳಿಂದ ಗಣ್ಯರು ಸಾಮಾಜಿಕ ಮಾಧ್ಯಮಗಳ ಮೂಲಕ ಅವರಿಗೆ ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ.

ದೇಶದ ರಾಜಕೀಯ ನಾಯಕರು, ಗಣ್ಯರು, ಸೆಲೆಬ್ರಿಟಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಮೋದಿ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಿರುವ ಬಿಜೆಪಿ, ಇಂದು ದೇಶದಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ , ದೂರದೃಷ್ಟಿಯ ನಾಯಕರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ಸದೃಢ, ಸಮೃದ್ಧ ಭಾರತಕ್ಕಾಗಿ ನಿಮ್ಮ ಕ್ರಿಯಾಶೀಲ ನಾಯಕತ್ವ ಮತ್ತು ಸಮರ್ಪಣೆ ದೇಶದ ತಲೆಮಾರುಗಳಿಗೆ ಸ್ಫೂರ್ತಿ ನೀಡಲಿ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಪ್ರಧಾನಿ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ನಿಮ್ಮ ನೇತೃತ್ವದಲ್ಲಿ, ಭಾರತವು ಆರ್ಥಿಕ ಮಹಾಶಕ್ತಿಯಾಗುವತ್ತ ಸಾಗುತ್ತಿದೆ, 2047ರ ವೇಳೆಗೆ ದೇಶವನ್ನು 5 ಟ್ರಿಲಿಯನ್ ಆರ್ಥಿಕತೆಯನ್ನಾಗಿ ಮಾಡುವ ನಿಮ್ಮ ಸಂಕಲ್ಪವನ್ನು ಈಡೇರಿಸಲು ಮಹಾರಾಷ್ಟ್ರವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.

ನಿಮ್ಮ ವಿಕಸಿತ ಭಾರತದ ಕನಸುಗಳು ನನಸಾಗಲಿ. ಜನ್ಮದಿನದ ಶುಭಾಶಯಗಳು ಎಂದು ಖ್ಯಾತ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್ ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.

RELATED ARTICLES
- Advertisment -
Google search engine

Most Popular