Friday, April 4, 2025
Google search engine

Homeಅಪರಾಧಮೊಯಿದ್ದೀನ್ ಬಾವ ಸೋದರ ನಾಪತ್ತೆ ಪ್ರಕರಣ​: ಮಹಿಳೆ ಸೇರಿ 6 ಮಂದಿ ವಿರುದ್ಧ ಎಫ್​ಐಆರ್

ಮೊಯಿದ್ದೀನ್ ಬಾವ ಸೋದರ ನಾಪತ್ತೆ ಪ್ರಕರಣ​: ಮಹಿಳೆ ಸೇರಿ 6 ಮಂದಿ ವಿರುದ್ಧ ಎಫ್​ಐಆರ್

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ನಾಪತ್ತೆಯಾದ ಮುಮ್ತಾಜ್ ಆಲಿ ಸಹೋದರ ಹೈದರ್ ದೂರು ಆಧರಿಸಿ ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯೆಬ್ ಹಾಗೂ ಸಿರಾಜ್ ವಿರುದ್ದ ಎಫ್ಐಆರ್ ದಾಖಲಾಗಿದೆ.

ಮುಮ್ತಾಜ್ ಅಲಿ ಸಮಾಜದ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಅವರ ಗೌರವ ಹಾಳು ಮಾಡಲು ಮಹಿಳೆಯನ್ನು ಬಳಸಿಕೊಂಡು ಷಡ್ಯಂತ್ರ ರೂಪಿಸಿದ್ದಾರೆ. ಮುಮ್ತಾಜ್ ಆಲಿ ಅವರಿಗೆ ಅಕ್ರಮ ಸಂಬಂಧ ಇದೆ ಎಂದು ರೆಹಮತ್ ಸುಳ್ಳು ಪ್ರಚಾರ ಮಾಡಿ ಬೆದರಿಕೆ ಹಾಕಿದ್ದಾನೆ. 2024ರ ಜುಲೈನಿಂದ ಈವರೆಗೆ ಮುಮ್ತಾಜ್ ಅಲಿ ಅವರಿಂದ 50 ಲಕ್ಷ ರೂ. ವಸೂಲಿ ಮಾಡಿದ್ದಾರೆ. 25 ಲಕ್ಷ ರೂ. ಹಣವನ್ನು ಮಹಿಳೆ ಚೆಕ್ ಮೂಲಕ ಪಡೆದಿದ್ದಾಳೆ.

ಸತ್ತಾರ್ ಎಂಬಾತ ಮುಮ್ತಾಜ್ ಅಲಿಯ ರಾಜಕೀಯ ವಿರೋಧಿಯಾಗಿದ್ದಾನೆ. ಅಕ್ರಮ ಸಂಬಂಧ ಇದೆ ಎಂದು ಇವರು ನಿರಂತರ ಬ್ಲ್ಯಾಕ್ ಮೇಲ್ ಮಾಡಿದ್ದರು. ಜೀವ ಬೆದರಿಕೆ ಜೊತೆಗೆ ಮುಮ್ತಾಜ್ ಆಲಿ ಕುಟುಂಬಕ್ಕೂ ಬೆದರಿಸಿದ್ದರು. ಹೀಗಾಗಿಯೇ ಸಹೋದರ ಮುಮ್ತಾಜ್ ಆಲಿ ಮೆಸೇಜ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮುಮ್ತಾಜ್ ಅಲಿ ಸಹೋದರ ಹೈದರ್ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

RELATED ARTICLES
- Advertisment -
Google search engine

Most Popular