Friday, April 11, 2025
Google search engine

Homeಅಪರಾಧಕಾನೂನುಅಕ್ರಮ ಹಣ ವರ್ಗಾವಣೆ ಪ್ರಕರಣ: ಸೆಂಥಿಲ್ ಬಾಲಾಜಿಗೆ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸೆಂಥಿಲ್ ಬಾಲಾಜಿಗೆ ಜಾಮೀನು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ತಮಿಳುನಾಡು ಮಾಜಿ ಸಚಿವ ವಿ. ಸೆಂಥಿಲ್ ಬಾಲಾಜಿ ಅವರಿಗೆ ಸುಪ್ರೀಂ ಕೋರ್ಟ್ ಇಂದು ಗುರುವಾರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಆಗಸ್ಟೀನ್ ಜಾರ್ಜ್ ಎಂ. ಅವರಿದ್ದ ಪೀಠ, ಜಾಮೀನು ನೀಡಿದೆ.

ಇ.ಡಿ. ಪರ ವಕಾಲತ್ತು ವಹಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಬಾಲಜಿ ಪರ ವಾದ ಮಂಡಿಸಿದ್ದ ಮುಕುಲ್ ರೋಹಟಗಿ, ಸಿದ್ಧಾರ್ಥ್ ಲುಥಾರ ಅವರ ವಿಚಾರಣೆಯನ್ನು ಆಗಸ್ಟ್ ೧೨ರಂದು ನಡೆಸಿದ್ದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು.

೨೦೧೧ ರಿಂದ ೨೦೧೫ರಲ್ಲಿ ಎಐಎಡಿಎಂಕೆ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಚಿವರಾಗಿದ್ದ ಸೆಂಥಿಲ್ ಅವರು ಉದ್ಯೋಗ ಕೊಡಿಸುವುದಾಗಿ ಲಂಚ ಪಡೆದಿದ್ದಾರೆ ಎಂಬ ಆರೋಪದಲ್ಲಿ ೨೦೨೩ರ ಜೂನ್ ೧೪ರಂದು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಇ.ಡಿ., ಆಗಸ್ಟ್ ೧೨ರಂದು ಬಾಲಾಜಿ ವಿರುದ್ಧ ೩,೦೦೦ ಪುಟಗಳ ಚಾರ್ಜ್ಶೀಟ್ ಸಲ್ಲಿಸಿತ್ತು.

RELATED ARTICLES
- Advertisment -
Google search engine

Most Popular