Friday, April 4, 2025
Google search engine

Homeರಾಜ್ಯಒಂದು‌ ವಾರದಲ್ಲಿ ಯಜಮಾನಿಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

ಒಂದು‌ ವಾರದಲ್ಲಿ ಯಜಮಾನಿಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ: ಒಂದು‌ ವಾರದಲ್ಲಿ ಯಜಮಾನಿಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಹಾಕಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಶುಕ್ರವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ‘ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದ ಕಾರಣ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಹಾಕಲಾಗುತ್ತದೆ.ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ತಿಳಿಸಿದರು.

ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ‌ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಲಾಗುವದು. ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ವಿರೋಧ ಪಕ್ಷದವರಿಗೆ ಮಾತನಾಡುವುದನ್ನು ಬಿಟ್ಟರೆ ಬೇರೇನೂ ಬರುವುದಿಲ್ಲ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ನಮ್ಮ ಯೋಜನೆಗಳನ್ನೇ ಕಾಪಿ ಮಾಡಿಕೊಂಡು ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದರು ಎಂದು ಸಚಿವೆ ತಿರುಗೇಟು ನೀಡಿದರು.

RELATED ARTICLES
- Advertisment -
Google search engine

Most Popular