Sunday, April 20, 2025
Google search engine

Homeರಾಜ್ಯಸುದ್ದಿಜಾಲಕೇಂದ್ರ ಕಮಾಂಡ್ ಸೆಂಟರ್ ಪೊಲೀಸ್ ಕಾರ್ಯ ನಿರ್ವಹಣೆಯ ಮೇಲೆ ನಿಗಾ ವಹಿಸಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೇಂದ್ರ ಕಮಾಂಡ್ ಸೆಂಟರ್ ಪೊಲೀಸ್ ಕಾರ್ಯ ನಿರ್ವಹಣೆಯ ಮೇಲೆ ನಿಗಾ ವಹಿಸಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಮಂಗಳೂರು: ರಾಜ್ಯದಲ್ಲಿ ಕಮಾಂಡ್ ಸೆಂಟರ್ ಮೂಲಕ ಪೊಲೀಸ್ ಕಾರ್ಯ ನಿರ್ವಹಣೆ ಯ ಮೇಲೆ ನಿಗಾ ವಹಿಸಲಾಗುವುದು. ಈ ವ್ಯವಸ್ಥೆ ದೇಶದಲ್ಲಿಯೇ ಪ್ರಥಮ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ನಗರದ ವಾಮಂಜೂರಿನಲ್ಲಿ ಮಂಗಳೂರು ನಗರ ಪೊಲೀಸ್ ಘಟಕದ ಸಿಎಆರ್ ಕಚೇರಿ, ಬಜ್ಪೆ ಪೊಲೀಸ್ ಠಾಣೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಇದರ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾ ಡುತ್ತಿದ್ದರು.

ಈ ಕೇಂದ್ರ ಕಮಾಂಡ್ ಸೆಂಟರ್ ಮೂಲಕ ರಾಜ್ಯದಲ್ಲಿನ ಎಲ್ಲಾ ಪೊಲೀಸ್ ಠಾಣೆಗಳ ಕಾರ್ಯನಿರ್ವಹಣೆಯ ಬಗ್ಗೆ ನಿಗಾವಹಿಸಲಾಗುವುದು.ಈ ಕೇಂದ್ರದ ಬಹುತೇಕ ಕೆಲಸ ಕಾರ್ಯಗಳು ಪ್ರಗತಿಯಲ್ಲಿವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಪೊಲೀಸರಿಗೆ ವಸತಿ ಸಹಿತ ಮೂಲ ಸೌಕರ್ಯ ಒದಗಿಸಲು ಸರಕಾರ ಬದ್ಧವಾಗಿದೆ. ಪೋಲೀಸ್ ಗೃಹ ಯೋಜನೆಯ ಮೂಲಕ ೨೦೦೦೦ ಮನೆ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ೧೩೦೦೦ ಮನೆ ನಿರ್ಮಾಣ ಮಾಡಲಾಗಿದೆ. ದ.ಕ.ಜಿಲ್ಲೆಯಲ್ಲಿ ಇಂದು ಒಂಬತ್ತುವರೆ ಕೋಟಿ ರೂಪಾಯಿಗಳ ಕಟ್ಟಡ ಉದ್ಘಾಟನೆಯಾಗಿದೆ.ರಾಜ್ಯದ ಪೊಲೀಸರು ದೇಶದಲ್ಲಿಯೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.

ಶಾಸಕ ಡಾ.ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದ ಮುಖ್ಯ ಅತಿಥಿಯಾಗಿ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಭಾಗವಹಿಸಿದ್ದರು. ಸಮಾರಂಭದಲ್ಲಿ ಶಾಸಕರುಗಳಾದ ಮಂಜುನಾಥ್ ಭಂಡಾರಿ, ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ದ.ಕ ಜಿಲ್ಲಾ ಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಉಪ ಪೊಲೀಸ್ ಆಯುಕ್ತ ಸಿದ್ಧಾರ್ಥ ಗೋಯಲ್, ದಿನೇಶ್ ಕುಮಾರ್, ಪೊಲೀಸ್ ಇಲಾಖೆಯ ಮುಖ್ಯ ಅಭಿಯಂತರ ಮಂಜುನಾಥ್ ಎಸ್ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular