Thursday, April 3, 2025
Google search engine

Homeರಾಜ್ಯಸುದ್ದಿಜಾಲಮಂಗನ ಕಾಯಿಲೆ: ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತ್ಯು

ಮಂಗನ ಕಾಯಿಲೆ: ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತ್ಯು

ಚಿಕ್ಕಮಗಳೂರು: ಮಂಗನ ಕಾಯಿಲೆಗೆ ತುತ್ತಾಗಿದ್ದ 65 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ಮಂಗನ ಕಾಯಿಲೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ.

ನರಸಿಂಹರಾಜಪುರ ತಾಲೂಕು ಕಟ್ಟಿನಮನೆ ಗ್ರಾಮದ ಮಹಿಳೆ ಮಂಗನ ಕಾಯಿಲೆಗೆ ತುತ್ತಾಗಿ ಮೃತಪಟ್ಟಿದ್ದಾರೆ. ತಾಯಿ ಮತ್ತು ಮಗ ಮೇಲ್ಪಾಲ್ ಗ್ರಾಮದ ಕಾಫಿತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.

ಮಹಿಳೆಗೆ ಅನಾರೋಗ್ಯ ಕಾಣಿಸಿಕೊಳ್ಳುತ್ತಿದ್ದಂತೆ ಚಿಕಿತ್ಸೆಗೆ ಕೊಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ದು, ಮಂಗನ ಕಾಯಿಲೆ ಜತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಇದ್ದ ಹಿನ್ನಲೆ ಹೆಚ್ಚಿನ‌ ಚಿಕಿತ್ಸೆ ಮಣಿಪಾಲ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಡಿದ್ದಾರೆ.

ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಈ ವರ್ಷ ಮೊದಲ ಬಲಿ ಪಡೆದುಕೊಂಡಿದೆ.

RELATED ARTICLES
- Advertisment -
Google search engine

Most Popular