Saturday, April 19, 2025
Google search engine

Homeಸ್ಥಳೀಯಕರ್ತವ್ಯದಲ್ಲಿ ಪ್ರಾಮಾಣಿಕವಾಗಿದ್ದರೆ ಸಮಾಜದಲ್ಲಿ ಹೆಚ್ಚು ಗೌರವ

ಕರ್ತವ್ಯದಲ್ಲಿ ಪ್ರಾಮಾಣಿಕವಾಗಿದ್ದರೆ ಸಮಾಜದಲ್ಲಿ ಹೆಚ್ಚು ಗೌರವ


ಸಾಲಿಗ್ರಾಮ: ಯಾವುದೇ ಒಬ್ಬ ವ್ಯಕ್ತಿ ತನ್ನ ವೃತ್ತಿ ಜೀವನದಲ್ಲಿ ಪ್ರಾಮಾಣಿಕವಾಗಿ ಕರ್ತವ್ಯವನ್ನು ನಿರ್ವಹಿಸಿದರೆ ಅವರಿಗೆ ಸಮಾಜದಲ್ಲಿ ಸದಾ ಗೌರವ ಲಭಿಸುತ್ತದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ರಾಂಪುರ ಲೋಕೇಶ್ ಹೇಳಿದರು. ಅವರು ಸಮೀಪದ ರಾಂಪುರ ಗ್ರಾಮದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ಈಗ ಬೇರೆಡೆಗೆ ವರ್ಗಾವಣೆಗೊಂಡಿರುವ ಅಭಿಲಾಶ್ ಅವರನ್ನು ಅಭಿನಂದಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಪ್ರಮುಖವಾಗಿ ಶಿಕ್ಷಣ ಇಲಾಖೆಯಲ್ಲಿ ಸೇವೆಯನ್ನು ಸಲ್ಲಿಸುವ ಶಿಕ್ಷಕರುಗಳು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಆ ಮೂಲಕ ಉತ್ತಮ ವ್ಯಕ್ತಿತ್ವವುಳ್ಳ ವಿದ್ಯಾರ್ಥಿಗಳನ್ನಾಗಿ ರೂಪಿಸಬೇಕು ಎಂದರು.
ರಾಂಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾಂಶುಪಾಲರಾಗಿ ಕಳೆದ ೧೧ ವರ್ಷಗಳಿಂದ ಅಭಿಲಾಶ್ ಅವರು ಶಾಲೆಯ ಶಿಕ್ಷಕರುಗಳು, ಪೋಷಕರು, ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಗ್ರಾಮಸ್ಥರುಗಳೊಂದಿಗೆ ಉತ್ತಮ ಒಡನಾಟವನ್ನು ಇಟ್ಟುಕೊಂಡು ವಿದ್ಯಾರ್ಥಿಗಳಿಗೆ ಮೌಲ್ಯಯುತವಾದ ಶಿಕ್ಷಣವನ್ನು ಕೊಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇವರ ಈ ಸೇವಾ ಕಾರ್ಯ ಇತರ ಶಿಕ್ಷಕರುಗಳಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ಪ್ರಾಂಶುಪಾಲರ ಮಾರ್ಗದಲ್ಲೇ ಶಿಕ್ಷಕರುಗಳು ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣವನ್ನು ನಿರ್ಮಿಸಿ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಹರ್ಷವರ್ಧನ, ಎಸ್.ಡಿ.ಗಂಗಾಧರ, ಮಾಜಿ ಸದಸ್ಯ ಡಿ.ದೇವರಾಜು, ಪತ್ರಕರ್ತ ಕೆ.ಟಿ.ಮೋಹನ್ ಕುಮಾರ್, ಮುಖಂಡರಾದ ಮಂಜುನಾಥ್, ರಾಮಚಂದ್ರು, ಫಿಶ್ ಶಿವು ಸೇರಿದಂತೆ ಹಲವರು ಇದ್ದರು.

RELATED ARTICLES
- Advertisment -
Google search engine

Most Popular