Tuesday, April 8, 2025
Google search engine

Homeಅಪರಾಧಮಾನಸಿಕ ಅಸ್ವಸ್ಥ ಮಗನಿಂದ ತಾಯಿ ಮೇಲೆ ಕೊಡಲಿಯಿಂದ ಹಲ್ಲೆ: ಸಿನಿಮೀಯ ರೀತಿಯಲ್ಲಿ ಆರೋಪಿ ಬಂಧನ

ಮಾನಸಿಕ ಅಸ್ವಸ್ಥ ಮಗನಿಂದ ತಾಯಿ ಮೇಲೆ ಕೊಡಲಿಯಿಂದ ಹಲ್ಲೆ: ಸಿನಿಮೀಯ ರೀತಿಯಲ್ಲಿ ಆರೋಪಿ ಬಂಧನ

ಗದಗ: ಮಾನಸಿಕ ಅಸ್ವಸ್ಥ ಮಗ ತನ್ನ ಹೆತ್ತ ತಾಯಿಯ ಮೇಲೆಯೇ ಕೊಡಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಅಟ್ಟಹಾಸ ಮೆರೆದಿರುವ ಅಮಾನವೀಯ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಕಿ ಗ್ರಾಮದ ಕುರುಬರ ಓಣಿಯಲ್ಲಿ ನಡೆದಿದೆ.

ಸದ್ಯ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ಮಾಡಿ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಮಾನಸಿಕ ಅಸ್ವಸ್ಥರಾಗಿರುವ ಶಿವಪ್ಪ ತಟ್ಟಿ ಎಂಬಾತ ತನ್ನ ತಾಯಿ ಗೌರವ್ವನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದು ಗೌರವ್ವನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳನ್ನು ರೋಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ಶಿವಪ್ಪ ಈ ಹಿಂದೆ ತಂದೆ ಮೇಲೂ ಹಲ್ಲೆ ಮಾಡಿದ್ದ. ಈಗ ತಾಯಿ ಮೇಲೂ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಇತ್ತೀಚೆಗೆ ತಾವು ಸಾಕಿದ್ದ ಕುದುರೆಯನ್ನೂ ಸಹ ಕೊಡಲಿಯಿಂದ ಹೊಡೆದು ಸಾಯಿಸಿದ್ದನಂತೆ.

ತಾಯಿಯ ಮೇಲೆ ಹಲ್ಲೆ ನಡೆಸಿ ರೋಡಿಗೆ ಬಂದು ಸಾರ್ವಜನಿಕರಿಗೂ ಕೊಡಲಿ ಝಳಪಿಸಿ ಅಟ್ಟಹಾಸ ಮೆರೆದಿದ್ದಾನೆ. ಈ ವೇಳೆ ಆತಂಕಗೊಂಡ ಸಾರ್ವಜನಿಕರು 112ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿ ಮಾನಸಿಕ ಅಸ್ವಸ್ಥ ಆರೋಪಿಯನ್ನು ಹಿಡಿಯಲು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಸತತ ಒಂದು ಗಂಟೆಗಳ ಕಾರ್ಯಾಚರಣೆ ಬಳಿಕ ಆರೋಪಿಯನ್ನು ಸೆರೆ ಹಿಡಿದಿದ್ದಾರೆ.

ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಪಾಲಕರೊಂದಿಗೆ ಧಾರವಾಡ ನಿಮ್ಹಾನ್ಸ್ ಗೆ ಶಿವಪ್ಪನನ್ನು ರವಾನಿಸಲಾಗಿದೆ. ಪೊಲೀಸ್ ಸಿಬ್ಬಂದಿ ಎಸ್​ಡಿ ಗೌಡರ, ವೀರಪ್ಪ ದೊನ್ನೆಗೌಡ, ಎಚ್ಎಸ್ ದೊಣ್ಣೆ ಗುಡ್ಡ, ಮಹೇಶ್ ಚಕ್ರಸಾಲಿ ಅವರು ಸಾರ್ವಜನಿಕರೊಂದಿಗೆ ಸೇರಿ ಮಾನಸಿಕ ಅಸ್ವಸ್ಥ ಮಗನನ್ನು ಹಿಡಿದು ನಿಮ್ಹಾನ್ಸ್​ಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular