Friday, April 4, 2025
Google search engine

Homeಅಪರಾಧವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವು: 40 ದಿನದ ಕಂದಮ್ಮನನ್ನು ಅಗಲಿದ ತಾಯಿ

ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವು: 40 ದಿನದ ಕಂದಮ್ಮನನ್ನು ಅಗಲಿದ ತಾಯಿ

ಬಳ್ಳಾರಿ: ಸೀಜರಿನ್ ಆಪರೇಷನ್ ಸಮರ್ಪಕವಾಗಿ ಆಗದ ಕಾರಣ ನಂಜು ಆಗಿದೆ. ಹೊಲಿಗೆ ಹಾಕಿದ ಜಾಗದಲ್ಲಿ ಕೀವು ತುಂಬಿಕೊಂಡಿತ್ತು. ಹೀಗಾಗಿ ರೋಜಮ್ಮಳ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಲಾಗಿದೆ.

ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ನಡುವೆ ವೈದ್ಯರ ನಿರ್ಲಕ್ಷದಿಂದಾಗಿ ಬಾಣಂತಿಯೊಬ್ಬರು ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ ಎಂಬ ಆರೋಪಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಗನೂರುಹಟ್ಟಿ ಗ್ರಾಮದ ರೋಜಮ್ಮ(೨೫) ಅಕ್ಟೋಬರ್ ೩೧ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ವೈದ್ಯೆ ಡಾ.ರೂಪಶ್ರೀ ಸೀಜರಿನ್ ಆಪರೇಷನ್ ಮಾಡಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದರು. ಐದು ದಿನಗಳ ಬಳಿಕ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ಆದರೆ ಆಗಾಗ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿತ್ತು. ಹೀಗಾಗಿ ಬುಧವಾರ ನಾಯಕನಹಟ್ಟಿ ಸರ್ಕಾರಿ ಆಸ್ಪತ್ರೆ ತೆರಳಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕತ್ಸೆಗೆಂದು ಜಿಲ್ಲಾಸ್ಪತ್ರೆಗೆ ಬಂದಿದ್ದಾರೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ರೋಜಮ್ಮ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೀಜರಿನ್ ಆಪರೇಷನ್ ಸಮರ್ಪಕವಾಗಿ ಆಗದ ಕಾರಣ ನಂಜು ಆಗಿದೆ. ಹೊಲಿಗೆ ಹಾಕಿದ ಜಾಗದಲ್ಲಿ ಕೀವು ತುಂಬಿಕೊಂಡಿತ್ತು. ಹೀಗಾಗಿ ರೋಜಮ್ಮಳ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವಾಗಿದೆ. ಆಸ್ಪತ್ರೆಗೆ ಬಂದಾಗ ದುಡ್ಡು ಕೊಡದೆಯೇ ಕೆಲಸವೇ ಮಾಡಲ್ಲ. ಮಾಡುವ ಕೆಲಸದಲ್ಲೂ ನಿರ್ಲಕ್ಷ ತೋರಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಮೃತ ರೋಜಮ್ಮಗೆ ೪೦ದಿನದ ಪುಟ್ಟ ಮಗು ಸೇರಿ ಮೂವರು ಮಕ್ಕಳಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಸೂಕ್ತ ಪರಿಹಾರ ನೀಡಬೇಕೆಂಬುದು ಸಂಬಂಧಿಕರು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular